ಗದಗದ 11 ಗ್ರಾಮಗಳಲ್ಲಿ ಶೇ.100 ರಷ್ಟು ಲಸಿಕೆ ಸಾಧನೆ
ಗದಗ ಜಿಲ್ಲೆಯ 11 ಗ್ರಾಮಗಳಲ್ಲಿ ಎಲ್ಲಾ ಅರ್ಹ ನಿವಾಸಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಶೇ.98 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದು, 18 ವರ್ಷ ಮೇಲ್ಪಟ್ಟವರಲ್ಲಿ ಶೇ 100ರಷ್ಟು ಲಸಿಕೆ ನೀಡಿಕೆ ಸಾಧ್ಯವಾಗಿದೆ.
Published: 09th September 2021 08:06 AM | Last Updated: 09th September 2021 08:06 AM | A+A A-

ಸಂಗ್ರಹ ಚಿತ್ರ
ಗದಗ: ಗದಗ ಜಿಲ್ಲೆಯ 11 ಗ್ರಾಮಗಳಲ್ಲಿ ಎಲ್ಲಾ ಅರ್ಹ ನಿವಾಸಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಶೇ.98 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದು, 18 ವರ್ಷ ಮೇಲ್ಪಟ್ಟವರಲ್ಲಿ ಶೇ 100ರಷ್ಟು ಲಸಿಕೆ ನೀಡಿಕೆ ಸಾಧ್ಯವಾಗಿದೆ.
ಗ್ರಾಮ ಪಂಚಾಯಿತಿ, ಜಿಲ್ಲೆಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಜನರನ್ನು ನಿರಂತರ ಪ್ರಯತ್ನದಿಂದ ಇದು ಸಾಧ್ಯವಾಗಿದೆ.
ಇನ್ನೊಂದು ವಾರದಲ್ಲಿ ಜಿಲ್ಲೆಯ 50 ಗ್ರಾಮಗಳಲ್ಲಿ ಎಲ್ಲ ಅರ್ಹರಿಗೂ ಕನಿಷ್ಠ ಒಂದು ಡೋಸ್ ಲಸಿಕೆ ನೀಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳು ಆನ್'ಲೈನ್ ಹಾಗೂ ಆಫ್'ಲೈನ್ ಮಾದರಿಯಲ್ಲಿ ನಿರಂತರವಾಗಿ ಲಸಿಕಾ ಅಭಿಯಾನ ನಡೆಸುತ್ತಿರುವುದರಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.