ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 967 ಪ್ರಕರಣ ಪತ್ತೆ; 10 ಸಾವು, 6 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 967 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,131ಕ್ಕೆ ಏರಿಕೆಯಾಗಿದೆ.
ಕೊರೋನಾ
ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 967 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,131ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,472ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 310 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,40,963ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 921 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,05,604ಕ್ಕೆ ಏರಿಕೆಯಾಗಿದೆ. ಇನ್ನು17,028 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,67,679 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 967 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.57ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ರಾಮನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com