ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸಿಎಂ ಸೂಚನೆ
ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
Published: 10th September 2021 05:22 PM | Last Updated: 10th September 2021 05:22 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.
ಅದರಂತೆ ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ.