ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ ರಾಜ್ಯ ಸರ್ಕಾರ: ರಾತ್ರಿ ನಿರ್ಬಂಧ ಮುಂದುವರಿಕೆ

ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಿ‌ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಆದೇಶ ವಾಪಾಸ್ ಪಡೆಯಲಾಗಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಿ‌ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಆದೇಶ ವಾಪಾಸ್ ಪಡೆಯಲಾಗಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಇಳಿಮುಖ ಹಿನ್ನೆಲೆ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗಿದ್ದು ಜನರು ಎಂದಿನಂತೆ ತಮ್ಮ ದೈನಂದಿನ ಕೆಲಸ ನಿರ್ವಹಿಸಬಹುದು. ರಾಜ್ಯದ ಸರಾಸರಿ ಪಾಸಿಟಿವಿಟಿ ರೇಟ್ ಶೇ. 0.73ಕ್ಕೆ ಇಳಿದಿದೆ.

ವೀಕೆಂಡ್ ಕರ್ಫ್ಯೂ ಹೇರಿಕೆ‌ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇದೆ. ಈ‌ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಆದೇಶ ರದ್ದಾಗಿದೆ. ಸೋಂಕು ಹೆಚ್ಚಳ‌ ಆದ್ರೆ ವೀಕೆಂಡ್ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳದ ಗಡಿ ಜಿಲ್ಲೆಗಳಿಗೆ ರಿಲೀಫ್ ಸಿಕ್ಕಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ವೀಕೆಂಡ್ ಕರ್ಫ್ಯೂವಿನಿಂದ ಮುಕ್ತವಾಗಿವೆ.

ಜಿಲ್ಲೆಯಲ್ಲಿ ಮುಂದಿನ ಶನಿವಾರ ಮತ್ತು ಭಾನುವಾರ ಕೋವಿಡ್ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಎಲ್ಲ ವ್ಯಾಪಾರ, ವಹಿವಾಟುಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಎಲ್ಲ ಅಂಗಡಿ ಮಳಿಗೆಗಳ ಮಾಲೀಕರು ಮತ್ತು ಸಿಬ್ಬಂದಿ ಕನಿಷ್ಠ ಒಂದು ಡೋಸ್ ಆದರೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಂಡಿರಬೇಕು.

ಪ್ರತಿದಿನ ರಾತ್ರಿ ಒಂಬತ್ತು ಗಂಟೆಯಿಂದ ಮುಂಜಾನೆ ಐದು ಗಂಟೆ ತನಕ ರಾತ್ರಿ ಕರ್ಫ್ಯೂ ಇರಲಿದೆ. ವ್ಯಾಪಾರ ನಡೆಸುವವರಿಗೆ ಪ್ರತಿ 10 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲಿದ್ದು, ತಪಾಸಣೆ ಮತ್ತು ಕಂಟೈನ್ಮೆಂಟ್ ಝೋನ್ ನಡೆಸುವ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಸ್ಥಳೀಯ ಆಡಳಿತ ಸಂಸ್ಥೆಯ ಸಿಬ್ಬಂದಿಗಳಿಗೆ ಸಹಕಾರ ನೀಡುವಂತೆ ಅವರು ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com