ಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ.
Published: 13th September 2021 12:24 PM | Last Updated: 13th September 2021 02:02 PM | A+A A-

ಗಜಪಯಣ ಆರಂಭ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸೋಮವಾರ ಆಯೋಜಿಸಿದ್ದ ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಿತು.
ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ 8 ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
Howdah elephant Abhimanyu and other elephants all set for Gajapayana 2021 as part of the Mysore Dasara Festival at Veeranahosahalli in Hunsur @NewIndianXpress @XpressBengaluru @santwana99 @ShivascribeTNIE @vinodkumart5 @KannadaPrabha pic.twitter.com/kx550yU3bI
— udayshankar S (@UdayUdayphoto2) September 13, 2021
ವಿವಿಧ ಶಿಬಿರಗಳಿಂದ ವೀರನಹೊಸಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಸಿಂಗರಿಸಲಾಗಿತ್ತು. ಅಭಿಮನ್ಯು ಜೊತೆಗೆ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋಪಾಲಸ್ವಾಮಿ ಆನೆಗಳು ಈ ಬಾರಿ ಭಾಗಿಯಾಗಲಿವೆ.
ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಎಸ್ ಪಿ ಆರ್.ಚೇತನ್, ಮೇಯರ್ ಸುನಂದಾ ಫಾಲನೇತ್ರ ಪಾಲ್ಗೊಂಡಿದ್ದರು.