ಮಾದಕ ವಸ್ತು ಮಾರಾಟ ಯತ್ನ: ಮೂವರು ಸಿಸಿಬಿ ವಶ

ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್​ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್​ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಸುಮಾರು 30 ಲಕ್ಷ ರೂ ಮೌಲ್ಯದ 500 ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ನಗರದ ಕೊಡಿಗೆಹಳ್ಳಿಯಲ್ಲಿ ಎಂಡಿಎಂಎ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಐಟಿ ಉದ್ಯೋಗಿಗಳಿಗೆ ಹಾಗೂ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಆರೋಪಿಗಳ ವಿರುದ್ಧ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com