ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕೇವಲ ಶೇ. 19.43 ರಷ್ಟು ಅಭ್ಯರ್ಥಿಗಳು ಉತ್ತೀರ್ಣ
ಇತ್ತೀಚಿಗೆ ನಡೆದ 2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಸೋಮವಾರ ಪ್ರಕಟಗೊಂಡಿದ್ದು, ಶೇಕಡಾ 19.43 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.
Published: 14th September 2021 08:32 AM | Last Updated: 14th September 2021 01:03 PM | A+A A-

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು
ಬೆಂಗಳೂರು: ಇತ್ತೀಚಿಗೆ ನಡೆದ 2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಸೋಮವಾರ ಪ್ರಕಟಗೊಂಡಿದ್ದು, ಶೇಕಡಾ 19.43 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.
1 ರಿಂದ 5ನೇ ತರಗತಿಗೆ ಬೋಧಿಸುವ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತೆಗಾಗಿ ನಡೆದ ಪರೀಕ್ಷೆಯಲ್ಲಿ 18, 960 ಶಿಕ್ಷಕ ಆಕಾಂಕ್ಷಿ ಅಭ್ಯರ್ಥಿಗಳು ಮತ್ತು 26, 114 ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಸೇರಿದಂತೆ ಒಟ್ಟಾರೇ 2,31,886 ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಸುಮಾರು 23, 025 ರಷ್ಟು ಹುದ್ದೆಗಳು ಖಾಲಿ ಇವೆ, ಆದಾಗ್ಯೂ, ಈಗ ಪ್ರಕಟಗೊಂಡಿರುವ ಫಲಿತಾಂಶ ಶಿಕ್ಷಕ ಹುದ್ದೆ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ.
ಒಟ್ಟಾರೇ, 2,31,886 ಅಭ್ಯರ್ಥಿಗಳು ಶಿಕ್ಷಕ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಹುದ್ದೆಗೆ 1,02,282 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 93, 176 ಅಭ್ಯರ್ಥಿಗಳು ಪರೀಕ್ಷೆಯಗೆ ಹಾಜರಾಗಿದ್ದರು. ಇದರಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ 13, 639 ಅಭ್ಯರ್ಥಿಗಳು ಶೇ. 60ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದರೆ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ 5,321 ಅಭ್ಯರ್ಥಿಗಳು ಶೇ 55-60 ನಡುವೆ ಅಂಕಗಳನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರ ಅರ್ಹತಾ ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 1,49,552 ಅಭ್ಯರ್ಥಿಗಳ ಪೈಕಿ 1,38,710 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ 19,523 ಅಭ್ಯರ್ಥಿಗಳು ಶೇ, 60ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದರೆ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ 6,591 ಅಭ್ಯರ್ಥಿಗಳು ಶೇ. 55-60ರ ನಡುವೆ ಅಂಕಗಳನ್ನು ಪಡೆದಿದ್ದಾರೆ.
ಆಗಸ್ಟ್ 22 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಪರೀಕ್ಷೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ 21 ಅಭ್ಯರ್ಥಿಗಳು ಓಎಂಆರ್ ಶೀಟ್ ಗೆ ಸಹಿ ಹಾಕದ ಕಾರಣ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಶೇಕಡಾ 3 ರಷ್ಟು ಮಂದಿ ಮಾತ್ರ ಉತ್ತೀರ್ಣರಾಗಿದ್ದರು. ಈ ಬಾರಿ ಸುಧಾರಣೆಯಾಗಿದೆ ಎಂದು ಅಖಿಲ ಭಾರತ ಶಿಕ್ಷಕರ ಒಕ್ಕೂಟದ ಉಪಾಧ್ಯಕ್ಷ ಬಸವರಾಜ ಗುರಿಕಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.