ಮಂಡ್ಯ: ಅನುಮತಿ ಪಡೆಯದೇ ಎಸ್ಪಿ ನಿವಾಸದಲ್ಲಿದ್ದ ಮರಗಳಿಗೆ ಕೊಡಲಿ

ಅರಣ್ಯ ಇಲಾಖೆ ಅನುಮತಿ ಪಡೆಯದೇ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುಭಾಷ್ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ ಆವರಣದಲ್ಲಿದ್ದ ಮರಗಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎಸ್ ಪಿ ನಿವಾಸದ ಬಳಿ ಮರ ಕತ್ತರಿಸಿರುವುದು
ಎಸ್ ಪಿ ನಿವಾಸದ ಬಳಿ ಮರ ಕತ್ತರಿಸಿರುವುದು

ಮಂಡ್ಯ: ಅರಣ್ಯ ಇಲಾಖೆ ಅನುಮತಿ ಪಡೆಯದೇ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುಭಾಷ್ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ ಆವರಣದಲ್ಲಿದ್ದ ಮರಗಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಡಾ.ಎಂ.ಅಶ್ವಿನಿ ಅವರು ರಸ್ತೆ ಬಂದ್ ಮಾಡಿಸಿ ವಾಸ್ತು ಕಾರಣಕ್ಕೆ ನಿವಾಸದ ಒಳ ಆವರಣದಲ್ಲಿದ್ದ 11 ಅಶೋಕ ಮರಗಳನ್ನು ಯಂತ್ರದ ಮೂಲಕ ಕತ್ತರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಟ್ರೈನಿ ಪೊಲೀಸರಿಂದ ರೆಂಬೆ ಕೊಂಬೆಗಳನ್ನು ಪೊಲೀಸ್ ವಾಹನದಲ್ಲಿ ಸ್ಥಳಾಂತರ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಮಾತನಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಮ್ಮಿಂದ ಯಾವುದೇ ರೀತಿಯ ಅನುಮತಿ ಪಡೆದಿಲ್ಲ. ಸರ್ಕಾರಿ ನಿವಾಸ ಆಗಿರುವುದರಿಂದ ಅನುಮತಿ ಪಡೆಯಬೇಕಾಗಿದೆ. ಇದರ ಬಗ್ಗೆ ನೋಟಿಸ್ ನೀಡಲಾಗುವುದು ಎಂದರು.

ನೋಟಿಸ್‍ಗೆ ಉತ್ತರ ನೀಡದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com