ಮಂಗಳೂರು: ನಿಫಾ ವೈರಸ್ ಭೀತಿ, ಟೆಸ್ಟಿಂಗ್ ಕಿಟ್ ಕಂಪನಿ ನೌಕರ ಆಸ್ಪತ್ರೆಯಲ್ಲಿ ಐಸೋಲೇಶನ್!

ನಿಫಾ ವೈರಸ್ ತಗುಲಿರಬಹುದೆಂದು ಶಂಕೆಗೊಳಗಾದ ಗೋವಾ ಮೂಲದ ನಿಫಾ ಮತ್ತು ಕೋವಿಡ್ ಟೆಸ್ಟ್ ಕಿಟ್ ತಯಾರಿಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟೆಡ್ ಆಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ನಿಫಾ ವೈರಸ್ ತಗುಲಿರಬಹುದೆಂದು ಶಂಕೆಗೊಳಗಾದ ಗೋವಾ ಮೂಲದ ನಿಫಾ ಮತ್ತು ಕೋವಿಡ್ ಟೆಸ್ಟ್ ಕಿಟ್ ತಯಾರಿಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟೆಡ್ ಆಗಿದ್ದಾರೆ.

ಆತನ ರಕ್ತ, ಮೂತ್ರ ಮತ್ತು ಮೂಗಿನ ಸ್ವಾಬ್ ಗಳನ್ನು ಪರೀಕ್ಷೆಗಾಗಿ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಆದಾಗ್ಯೂ, ಆತಂಕಪಡಬೇಕಾದ ಅಗತ್ಯವಿಲ್ಲ, ಶಂಕಿತ ವ್ಯಕ್ತಿ ಯಾವುದೇ ರೋಗ ಲಕ್ಷಣ ಹೊಂದಿಲ್ಲ, ಆತನ  ಎಲ್ಲಾ ಪ್ರಮುಖ ನಿಯತಾಂಕಗಳು ಸ್ಥಿರವಾಗಿವೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಸೋಮವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ, ಆತ ಸಂಪೂರ್ಣವಾಗಿ ಚೆನ್ನಾಗಿದ್ದಾನೆ. ಎಲ್ಲವೂ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಆತನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 8 ರಂದು ಶಂಕಿತ ವ್ಯಕ್ತಿ ಗೋವಾದಿಂದ ಸ್ವಗ್ರಾಮ ಕಾರವಾರಕ್ಕೆ ಬೈಕ್ ನಲ್ಲಿ ಬಂದಿದ್ದಾನೆ, ದೂರದ ಪ್ರಯಾಣದಲ್ಲಿ ಮಳೆಯಲ್ಲಿ ನೆನೆದಿದ್ದರಿಂದ ತೀವ್ರ ತಲೆನೋವು ಮತ್ತು ಜ್ವರ ಬಂದಿದೆ. ಇದರಿಂದ ಆತಂಕಗೊಂಡ ಆತ ಗೂಗಲ್ ನಲ್ಲಿ ನಿಫಾ ವೈರಸ್ ಲಕ್ಷಣವನ್ನು ತಿಳಿದುಕೊಂಡಿದ್ದಾನೆ. ಹೀಗಾಗಿ ಆತನ ಹೃದಯ ಬಡಿತ ತೀವ್ರಗೊಂಡಿದೆ. ನಂತರ ಆತ ಕಾರವಾರಕ್ಕೆ ಆಸ್ಪತ್ರೆಗೆ ಹೋದಾಗ ಉಡುಪಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ಶಿಫಾರಸು ಮಾಡಲಾಗಿದೆ. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೋವಿಡ್- ಮಾರ್ಗಸೂಚಿಗಳ ಪಾಲನೆಯೊಂದಿಗೆ ಶಂಕಿತವ್ಯಕ್ತಿ ಕೋವಿಡ್ ಕಿಟ್ ತಯಾರಿಕ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಜಿಲ್ಲಾಧಿಕಾರಿ ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com