ಅಪಘಾತ ದೃಶ್ಯ
ರಾಜ್ಯ
ಬೆಂಗಳೂರು: ಬೈಕ್-ಕಾರು ನಡುವೆ ಭೀಕರ ಅಪಘಾತ; ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಿಂದ ಬಿದ್ದು ಯುವಕ-ಯುವತಿ ಸಾವು
ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡುವ ರಭಸದಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಯುವತಿಯರು ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದಾರೆ.
ಇನ್ನು ಅಪಘಾತದಲ್ಲಿ ಕಾರು ಸಹ ಜಕಂಗೊಂಡಿದ್ದು ಫೈಓವರ್ ನ ತುದಿಗೆ ಬಂದು ನಿಂತಿದೆ. ಇನ್ನು ಸ್ವಲ್ಪ ವಾಲಿದ್ದರೂ ಕಾರು ಸಹ ಫ್ಲೈಓವರ್ ಮೇಲಿನಿಂದ ಕೆಳಗೆ ಬೀಳುವ ಸಂಭವವಿತ್ತು.
ಸದ್ಯ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ