'ನಿಫಾ' ಪರೀಕ್ಷೆಗೊಳಗಾಗಿದ್ದ ವ್ಯಕ್ತಿಯ ವೈದ್ಯಕೀಯ ವರದಿ ನೆಗೆಟಿವ್, ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ!

ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಬುಧವಾರ ತಿಳಿದುಬಂದಿದೆ. 

ಜ್ವರ ಮತ್ತು ಕೆಲವು ಲಕ್ಷಣ ಪತ್ತೆಯಾದ ಹಿನ್ನೆಲೆ ಕಾರವಾರದ ಯುವಕ ಆಸ್ಪತ್ರೆಗೆ ದಾಖಲಾಗಿದ್ದ. ಗೋವಾದ ಲ್ಯಾಬ್​ನಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆತ ತನಗೆ ನಿಫಾ ವೈರಸ್ ಆತಂಕವಿದೆ ಎಂದು ಟೆಸ್ಟ್ ಮಾಡುವಂತೆ ಮನವಿ ಮಾಡಿದ್ದ. ಸದ್ಯ ವೈದ್ಯಕೀಯ ಪರೀಕ್ಷೆಯ ವರದಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಕೈ ಸೇರಿದ್ದು, ನಿಫಾ ಸೋಂಕು ತಗುಲಿಲ್ಲ, ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಗೋವಾದ ಲ್ಯಾಬ್​ನಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಜ್ವರ ಸೇರಿದಂತೆ ಕೆಲ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆತಂಕ ಸೃಷ್ಟಿಯಾಗಿತ್ತು. ಹೀಗಾಗಿ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತನಗೆ ನಿಫಾದ ಆತಂಕವಿದೆ ಅಂತ ಯುವಕನೇ ಹೇಳಿಕೊಂಡಿದ್ದ ಹಾಗೂ ಟೆಸ್ಟ್ ಮಾಡಲು ಮನವಿ ಮಾಡಿದ್ದ. 

2 ದಿನಗಳ ಹಿಂದೆ ಅವರಿಗೆ ಜ್ವರ ಬಂದಿದ್ದ ಹಿನ್ನೆಲೆಯಲ್ಲಿ ವ್ಯಕ್ತಿ ಗೂಗಲ್ ಮಾಡಿ ನಿಫಾ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬೆಳವಣಿಗೆ ಮಂಗಳೂರು ಜನತೆ ಆತಂಕಕ್ಕೊಳಗಾಗುವಂತೆ ಮಾಡಿತ್ತು. 

ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ಕಾರವಾರದ ವ್ಯಕ್ತಿ ಗೋವಾದಲ್ಲಿ ಕೆಲಸ ಮಾಡುತ್ತಿದ್ದ. ಆರ್​ಟಿಪಿಸಿಆರ್​ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್​ನಲ್ಲಿ ಕೆಲಸ ಮಾಡುತ್ತಿದ್ದ. ನಿಫಾ ಸ್ಯಾಂಪಲ್ ಟೆಸ್ಟ್ ಕೂಡ ಮಾಡಲಾಗುತ್ತಿತ್ತು. ಕಾರವಾರಕ್ಕೆ ಬೈಕ್​ನಲ್ಲಿ ಮಳೆಯಲ್ಲಿ ಬಂದಿದ್ದಾರೆ. ವ್ಯಕ್ತಿಯಲ್ಲಿ ಯಾವುದೇ ರೀತಿಯ ನಿಫಾ ಲಕ್ಷಣಗಳು ಕಂಡು ಬಂದಿಲ್ಲ. ಹಾಗಿದ್ದರೂ ಆತನ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಬೆಂಗಳೂರಿನಿಂದ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವ್ಯಕ್ತಿಯು ಎಲ್ಲಿಯೂ ಯಾರದ್ದೇ ಸಂಪರ್ಕಕ್ಕೆ ಬಂದಿಲ್ಲ. ಗೋವಾದಲ್ಲಿ ಕಲೆಸ ಮಾಡುತ್ತಿದ್ದ ಆತ ಹಬ್ಬಕ್ಕಾಗಿ ಕಾರವಾರದಲ್ಲಿ ತನ್ನ ಮನೆಗೆ ಬೈಕ್ ನಲ್ಲಿ ಬಂದ ವೇಳೆ ಮಳೆಯಲ್ಲಿ ನೆನೆದು ರಾತ್ರಿ ಜ್ವರ ಬಂದಿತ್ತು. ಈ ಬಗ್ಗೆ ಗೂಗಲ್ ನಲ್ಲಿ ಆತ ಹುಡುಕಾಡಿದಾಗ ಇದು ನಿಫಾದ ಲಕ್ಷಣವಿರಬಹುದೇನೋ ಎಂಬ ಆತಂಕದಿಂದ ಆಸ್ಪತ್ರೆಗೆ ದಾಖಲಾಗಿದ್ದ. ನಿಫಾ ಸೋಂಕಿನ ಶಂಕೆ ಇಲ್ಲದಿದ್ದರು ನಿರ್ಲಕ್ಷ್ಯ ಮಾಡಲು ಸಾಧ್ಯವಾಗದ ಕಾರಣ ಟೆಸ್ಟ್​ಗೆ ಕಳುಹಿಸಿದ್ದೇವೆ ಎಂದು ಹೇಳಿದ್ದರು. 

ವ್ಯಕ್ತಿ ಮನೆಯವರನ್ನು ಐಸೋಲೇಶನ್​ನಲ್ಲಿ ಇಡಲಾಗಿದೆ. ಉಡುಪಿ ಮತ್ತು ಕಾರವಾರ ಜಿಲ್ಲಾಡಳಿತಕ್ಕೆ ಈ ಬಗ್ಗೆ ಅಲರ್ಟ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು. 

ಆಂತಕ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ ಕಳುಹಿಸಲಾಗಿತ್ತು. ಇದೀಗ ವ್ಯಕ್ತಿಯ ವೈದ್ಯಕೀಯ ವರದಿ ನೆಗೆಟಿವ್ ಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com