1040 ವೈದ್ಯರನ್ನು ನೇಮಕ ಮಾಡಲಾಗಿದೆ: ಡಾ. ಕೆ.ಸುಧಾಕರ್

ಕೋವಿಡ್ ಸನ್ನಿವೇಶದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ 1040 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ ಸನ್ನಿವೇಶದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ 1040 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ದಿನಕರ್ ಕೇಶವಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, 860 ವೈದ್ಯರು ಕೆಲಸದ ಮೇಲೆ ಹಾಜರಾಗಿದ್ದಾರೆ. ಅವರಿಗೆ ಈಗಾಗಲೇ ಸ್ಥಳ ನಿಯುಕ್ತಿ ಮಾಡಲಾಗಿದೆ ಎಂದರು.

ಇನ್ನು 180 ಸ್ಥಳಗಳಿಗೆ ನೇಮಕಾತಿ ಮಾಡಿಕೊಂಡ ವೈದ್ಯರು ಕೆಲಸಕ್ಕೆ ಹಾಜರಾಗಿಲ್ಲ. ಅವರ ಸಮಸ್ಯೆಗಳನ್ನು ಕೇಳಿ ಶೀಘ್ರವೇ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ತಿಳಿಸಿದರು.

ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯ ವೈದ್ಯಾಧಿಕಾರಿ ಹುದ್ದೆ ಖಾಲಿ ಇದ್ದು, ಪಕ್ಕದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುವ ವೈದ್ಯರನ್ನು ವಾರದಲ್ಲಿ ಎರಡು ದಿನ ಕಲ್ಲಬ್ಬೆ ಕೇಂದ್ರದಲ್ಲಿ ಕೆಲಸ ಮಾಡುವಂತೆ ತಾತ್ಕಾಲಿಕವಾಗಿ ನಿಯೋಜನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com