ಕೋವಿಡ್ ಲಸಿಕೆ 2ನೇ ಡೋಸ್: ಅರ್ಹ ವ್ಯಕ್ತಿಗಳಿಗೆ ಎಸ್ಎಂಎಸ್ ರವಾನಿಸಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ

ಅರ್ಹ ವ್ಯಕ್ತಿಗಳು ಸಕಾಲಕ್ಕೆ 2ನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮಾಡಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ ಕೈಗೊಂಡಿದ್ದು, ಮೊದಲ ಡೋಸ್‌ ಪಡೆದ ದಿನಾಂಕದ ಜೇಷ್ಠತೆ ಆಧಾರದಲ್ಲಿ ಮುಂಚಿನ ದಿನವೇ ಸಂದೇಶ ಕಳುಹಿಸಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಮುಂದಾಗಿದೆ. 
ಉಡುಪಿಯಲ್ಲಿ ನಡೆಸಲಾದ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡಿರುವ ಜನರು
ಉಡುಪಿಯಲ್ಲಿ ನಡೆಸಲಾದ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡಿರುವ ಜನರು

ಉಡುಪಿ: ಅರ್ಹ ವ್ಯಕ್ತಿಗಳು ಸಕಾಲಕ್ಕೆ 2ನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮಾಡಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ ಕೈಗೊಂಡಿದ್ದು, ಮೊದಲ ಡೋಸ್‌ ಪಡೆದ ದಿನಾಂಕದ ಜೇಷ್ಠತೆ ಆಧಾರದಲ್ಲಿ ಮುಂಚಿನ ದಿನವೇ ಸಂದೇಶ ಕಳುಹಿಸಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಮುಂದಾಗಿದೆ. 

ಉಡುಪಿ ಉಪ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ಅವರು ಮಾತನಾಡಿ, ಎಲ್ಲಾ ಅರ್ಹ ವ್ಯಕ್ತಿಗಳಿಗೆ ಲಸಿಕೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ. ಮೊದಲ ಡೋಸ್ ಪಡೆದ ವ್ಯಕ್ತಿಗಳ ಮೊಬೈಲ್ ಗಳಿಗೆ ಸಂದೇಶ ರವಾನಿಸಿದ ಎರಡನೇ ಡೋಸ್ ಪಡೆದುಕೊಳ್ಳುವ ದಿನಾಂಕವನ್ನು ನೆನಪಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಡಿಸೆಂಬರ್ 31, 2021 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವುದು ಕೇಂದ್ರ ಸರ್ಕಾರದ ಗುರಿಯಾಗಿದ್ದು, ಲಸಿಕೆ ವ್ಯಾಪ್ತಿಯನ್ನು ವೇಗಗೊಳಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 17 ರಂದು ಜಿಲ್ಲೆಯ ಜನರಿಗೆ ಬೃಹತ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ಈ ಉದ್ದೇಶಕ್ಕಾಗಿ 80,000 ಡೋಸ್ ಲಸಿಕೆ ಲಭ್ಯವಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ 300 ಲಸಿಕೆ ಕೇಂದ್ರಗಳ ಮೂಲಕ ಲಸಿಕೆ ನೀಡಲಾಗುವುದು. 18 ವರ್ಷಕ್ಕಿಂತ ಮೇಲ್ಪಟ್ಟ 10,02,762 ಅರ್ಹ ಜನರಲ್ಲಿ, 8,47,940 (ಶೇ. 84.6) ಮೊದಲ ಡೋಸ್ ತೆಗೆದುಕೊಂಡಿದ್ದಾರೆ. 3,45,558 (ಶೇ. 34.5) ಇದುವರೆಗೆ ಎರಡನೇ ಡೋಸ್ ತೆಗೆದುಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ನವೆಂಬರ್ 30 ರೊಳಗಾಗಿ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಷ್ಟೇ ಅಲ್ಲದೆ, ಸೆಪ್ಟೆಂಬರ್ 16 ರಂದು ಬೆಳಿಗ್ಗೆ 10-11 ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಜನರಿಗೆ ಲಸಿಕೆ ಕುರಿತು ಇರುವ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತದೆ ಜನರು 9663957222 ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ, ಸಲಹೆಗಳನ್ನು ಪಡೆದುಕೊಳ್ಳಬಹುದು. ಕಸ್ತೂರ್ಬಾ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಅಶ್ವಿನಿ ಕುಮಾರ್ ಕರೆಗಳಿಗೆ ಉತ್ತರಿಸಲಿದ್ದಾರೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com