ಬೆಂಗಳೂರು: ಪತ್ರಿಕೆ ಸಂಪಾದಕನ ಕುಟುಂಬದ ಐವರು ಆತ್ಮಹತ್ಯೆಗೆ ಶರಣು; ಪವಾಡ ಸದೃಶ್ಯ ಬದುಕುಳಿದ 3 ವರ್ಷದ ಮಗು!
ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Published: 17th September 2021 08:36 PM | Last Updated: 17th September 2021 09:33 PM | A+A A-

ಹಲ್ಲೆಗೆರೆ ಶಂಕರ್
ಬೆಂಗಳೂರು: ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬ್ಯಾಡರಹಳ್ಳಿಯ 4ನೇ ಕ್ರಾಸ್ ನಲ್ಲಿರುವ ಹಲ್ಲೆಗೆರೆ ಶಂಕರ್ ಮನೆಯಲ್ಲಿ ಇಲ್ಲದ ವೇಳೆ ಪತ್ನಿ 50 ವರ್ಷದ ಭಾರತಿ, 27 ವರ್ಷದ ಮಗ ಮಧು ಸಾಗರ್, ಹೆಣ್ಣುಮಕ್ಕಳಾದ 33 ವರ್ಷದ ಸಿಂಚನಾ ಮತ್ತು 30 ವರ್ಷದ ಸಿಂಧುರಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಆತ್ಮಹತ್ಯೆಗೆ ಮುನ್ನ 9 ತಿಂಗಳ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಿಂಚನ ಪುತ್ರಿ 3 ವರ್ಷದ ಪ್ರೇಕ್ಷ ನಾಲ್ಕೈದು ದಿನಗಳಿಂದ ಮೃತದೇಹಗಳ ನಡುವೆ ಇದ್ದು ಅನ್ನಆಹಾರ ಇಲ್ಲದೆ ಪವಾಡ ಸದೃಶ್ಯ ಬದುಕುಳಿದಿದ್ದು ನಿತ್ರಾಣಗೊಂಡಿರುವ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಯುವಕ ಸಾವು
ಮನೆಯಿಂದ ಯಾರೂ ಹೊರಗಡೆ ಬರದಿರುವುದನ್ನು ಗಮನಿಸಿದ ಸ್ಥಳೀಯರು ಇಂದು ಸಂಜೆ ಮನೆಯ ಕಿಟಕಿ ಗಾಜನ್ನು ಹೊಡೆದು ನೋಡಿದಾಗ ಪ್ರಕರಣ ಬಯಲಿಗೆ ಬಂದಿದೆ.