ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ

ರಾಜ್ಯದಲ್ಲಿ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರದ ಮನವಿಯಂತೆ  ಎರಡು ತಿಂಗಳ ಸಮಯಾವಕಾಶವನ್ನು ಹೈಕೋರ್ಟ್ ನೀಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರದ ಮನವಿಯಂತೆ  ಎರಡು ತಿಂಗಳ ಸಮಯಾವಕಾಶವನ್ನು ಹೈಕೋರ್ಟ್ ನೀಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನೊಳಗೊಂಡ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ,  2021 ರ ನವೆಂಬರ್ 17 ಕ್ಕೆ ಮುಂದೂಡಿತು.
ಅವಧಿ ಮುಗಿದ ನಂತರವೂ ಚುನಾವಣೆ ನಡೆಸಲು ವಿಳಂಬ ಮಾಡಿದ್ದಕ್ಕಾಗಿ ನ್ಯಾಯಾಲಯವು ಸ್ವಯಂಪ್ರೇರಿತ ಪಿಐಎಲ್  ದಾಖಲಿಸಿಕೊಂಡಿತ್ತು.

ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಸಲ್ಲಿಸಿದ ಸ್ಥಿತಿ ವರದಿ ಪ್ರಕಾರ,  ನಗರ ಪುರಸಭೆಗಳು, ಪಟ್ಟಣ ಪುರಸಭೆಗಳು ಮತ್ತು ಪಟ್ಟಣ ಪಂಚಾಯತ್‌ಗಳನ್ನು ಒಳಗೊಂಡ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವಿಳಂಬವಾಗಿದೆ. 

ಬೆಂಗಳೂರು ನಗರ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ, ಗದಗ, ಧಾರವಾಡ ಮತ್ತು ತುಮಕೂರು ಸೇರಿದಂತೆ ಎಲ್ಲಾ  56 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಗಳನ್ನೊಳಗೊಂಡ ಅಂತಿಮ ಮೀಸಲಾತಿ ಅಧಿಸೂಚನೆಗಾಗಿ ಕಾಯುತ್ತಿರುವುದರಿಂದ ಚುನಾವಣೆ ವಿಳಂಬವಾಗಿರುವುದಾಗಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com