ಬೆಂಗಳೂರು: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕಜಾಲ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ
ಜಮೀನು ವಿವಾದದ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
Published: 18th September 2021 06:17 PM | Last Updated: 18th September 2021 06:44 PM | A+A A-

ಚಿಕ್ಕಜಾಲ ಪೊಲೀಸ್ ಠಾಣೆ
ಬೆಂಗಳೂರು: ಜಮೀನು ವಿವಾದದ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಫಲಕ ಕಿತ್ತು ಹಾಕಿರುವ ಕುರಿತು ಚಿಕ್ಕಜಾಲದ ನಿವಾಸಿ ಓರ್ವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಇನ್ಸ್ ಪೆಕ್ಟರ್ ರಾಘವೇಂದ್ರ, ತನಿಖೆ ನಡೆಸಲು 10 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರು ದೂರು ನೀಡಿದ್ದರು ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಘವೇಂದ್ರ ಅವರು ಈ ಹಿಂದೆಯೇ 8 ಲಕ್ಷ ರೂ. ಹಣವನ್ನು ಪಡೆದಿದ್ದರು. ಶನಿವಾರ 2 ಲಕ್ಷ ರೂ ಸ್ವೀಕರಿಸುವಾಗ ದಾಳಿ ನಡೆಸಿ, ಲಂಚದ ಹಣದೊಂದಿಗೆ ರಾಘವೇಂದ್ರ ಅವರನ್ನು ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.