ನಗರದ ಎಲ್ಲಾ ಮಕ್ಕಳಿಗೆ ಫ್ಲೂ ಲಸಿಕೆ ನೀಡಲು ಬಿಬಿಎಂಪಿ ಚಿಂತನೆ!

ಮಕ್ಕಳ ಸಮಿತಿ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಕಾರ್ಯ ನಿರ್ವಹಿಸುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆಯು ಶೀಘ್ರದಲ್ಲೇ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಫ್ಲೂ ಲಸಿಕೆ ನೀಡುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಕ್ಕಳ ಸಮಿತಿ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಕಾರ್ಯ ನಿರ್ವಹಿಸುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆಯು ಶೀಘ್ರದಲ್ಲೇ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಫ್ಲೂ ಲಸಿಕೆ ನೀಡುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಈ ಕುರಿತು ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, 2 ದಿನದ ಹಿಂದೆ ಮಕ್ಕಳ ತಜ್ಞರ ಸಮಿತಿಯೊಂದಿಗೆ ನಡೆದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮಕ್ಕಳಿಗೆ ಫ್ಲೂ ಲಸಿಕೆ ನೀಡುವ ಬಗ್ಗೆಯೂ ಸಲಹೆಗಳು ಬಂದಿವೆ. ಹೀಗಾಗಿ ಈ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು. 

ಫೀವರ್ ಫ್ಲೂ ಹಾಗೂ ಕೋವಿಡ್'ಗೂ ಸಂಬಂಧವಿಲ್ಲ. ಯಾವುದೇ ಸಂದರ್ಭದಲ್ಲಿ ಪರೀಕ್ಷೆ ಮಾಡಿಸಬಹುದು. ಆಸ್ಪತ್ರೆಗಳಲ್ಲಿ ದಾಖಲಾಗುವ ವೇಳೆ ಸಹಜವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಫ್ಲೂ ಲಕ್ಷಣ ಇದ್ದವರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ವೈರಲ್ ಫ್ಲೂ ಹಿಂದಿನಿಂದಲೂ ಇದೆ. ಹೀಗಾಗಿ ಫ್ಲೂ ಲಸಿಕಾ ಆಭಿಯಾನ ನಡೆಸಲು ಚಿಂತನೆ ನಡೆಸುತ್ತಿದ್ದು, ಸರ್ಕಾರದ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com