ರಾಜ್ಯದಲ್ಲಿ ದಾಖಲೆ 28 ಲಕ್ಷ ಡೋಸ್ ಲಸಿಕೆ: ಲಸಿಕೆ ನೀಡಿಕೆಯಲ್ಲಿ ದೇಶಕ್ಕೇ ನಂ.1 ಎನಿಸಿಕೊಂಡ ಕರ್ನಾಟಕ!

ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನ 28.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿಯೇ ನಂ.1 ಸ್ಥಾನ ಪಡೆದುಕೊಂಡ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದುಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನ 28.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿಯೇ ನಂ.1 ಸ್ಥಾನ ಪಡೆದುಕೊಂಡ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದುಕೊಂಡಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 71ನೇ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆ ಬೃಹತ್ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 

ಲಸಿಕಾ ಮೇಳದ ಅಂಗವಾಗಿ ಶುಕ್ರವಾರವೊಂದೇ ದಿನ 30 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಬೇಕೆಂಬ ಗುರಿಯನ್ನು ಹೊಂದಲಾಗಿತ್ತು. ಇದರಂತೆ ರಾತ್ರಿ 9.30ರ ಮಾಹಿತಿಯಂತೆ ಗುರಿಯ ಶೇ.88 ಸಾಧನೆಯಾಗಿದೆ. 12 ಸಾವಿರ ಲಸಿಕಾ ಕೇಂದ್ರದ್ಲ್ಲಿ ಲಸಿಕೆ ವಿತರಿಸಲಾಗಿದೆ ಎಂದು ತಿಳಿದುಬಂದಿದೆ. 

ಶಿವಮೊಗ್ಗ, ಬೆಂಗಳೂರ ನಗರ, ಧಾರವಾಡ, ರಾಮನಗರ, ಹಾಸನ, ದಾವಣೆಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಮತ್ತು ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ಶೇ.100ರಷ್ಟು ಗುರಿ ತಲುಪಲಾಗಿದೆ. 

ಉಳಿದಂತೆ ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ದಕ್ಷಿಣ ಕನ್ನಡ, ಕೊಡಗು, ಉತ್ತನ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಮೈಸೂರು, ಬಿಬಿಎಂಪಿ, ವಿಜಯಪುರ, ಕೋಲಾರ ಮತ್ತು ಯಾದಗಿರಿ ಜಿಲ್ಲೆ ಶೇ.75ಕ್ಕಿಂತ ಹೆಚ್ಚು ಸಾಧನೆ ಮಾಡಿದೆ. ಇನ್ನು ಕಲಬುರಗಿಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೇ.50 ಮೀರಿದ ಸಾಧನೆಯಾಗಿದೆ. 

ಬೆಂಗಳೂರಿನಲ್ಲಿ 4.79 ಲಕ್ಷ, ಬೆಳಗಾವಿ 2.54 ಲಕ್ಷ, ಬಳ್ಳಾರಿ 1.40 ಲಕ್ಷ ಡೋಸ್ ಲಸಿಕೆ ವಿತರಣೆಯಾಗಿದ್ದು, ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದೆ. 

ಇನ್ನು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರಪ್ರದೇಶ ಹಾಗೂ ಬಿಹಾರ ರಾಜ್ಯಕ್ಕಿಂತ ಹೆಚ್ಚು ಲಸಿಕೆಯನ್ನು ರಾಜ್ಯದಲ್ಲಿ ವಿತರಿಸಲಾಗಿದೆ. ಈ ಐತಿಹಾಸಿಕ ಲಸಿಕಾ ಅಭಇಯಾನದಲ್ಲಿ ಭಾಗಿಯಾದ ಆರೋಗ್ಯ ಕಾರ್ಯಕರ್ತರು ಮತ್ತು ಇತರೆ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ. ಕೋವಿಡ್ ವಿರುದ್ಧದ ಹೋರಾಟವನ್ನು ಮುನ್ನಡೆಸಿದ ಪ್ರಧಾನಿ ಮೋದಿಯವರ ಜನ್ಮದಿನದಂದೇ ಈ ಸಾಧನೆ ಆಘಿದೆ. ಈ ಮಧ್ಯೆ ರಾಜ್ಯದಲ್ಲಿ 5 ಕೋಟಿ ಡೋಸ್ ಗಿಂತ ಹೆಚ್ಚು ಲಸಿಕೆ ವಿತರಣೆ ನಡೆದಿದೆ. ಸೆಪ್ಟೆಂಬರ್ ನಲ್ಲಿ ಒಂದೂವರೆ ಕೋಟಿ ಡೋಸ್ ಲಸಿಕೆ ನೀಡಬೇಕೆಂಬ ಗುರು ಮುಟ್ಟುವ ವಿಶ್ವಾಸವಿದೆ ಎಂದು ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com