ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ

ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ, ಇನ್ನು ನೀವು ಯಾವ ಲೆಕ್ಕ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧಿಯನ್ನು ಹತ್ಯೆ ಮಾಡಲಿಕ್ಕಾಗುತ್ತೆ ಎಂದರೆ, ನಿಮ್ಮ ವಿಚಾರದಲ್ಲಿ ನಾವು ಆಲೋಚಿಸಬೇಕಾಗುತ್ತದೆ.
ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸದಸ್ಯರು ಸರ್ಕಾರದ ದೇವಾಲಯ ತೆರವು ಕ್ರಮದ ವಿರುದ್ಧ ಶನಿವಾರ  ಪ್ರತಿಭಟನೆ ನಡೆಸಿದರು.
ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸದಸ್ಯರು ಸರ್ಕಾರದ ದೇವಾಲಯ ತೆರವು ಕ್ರಮದ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು.
Updated on

ಮಂಗಳೂರು: ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ, ಇನ್ನು ನೀವು ಯಾವ ಲೆಕ್ಕ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧಿಯನ್ನು ಹತ್ಯೆ ಮಾಡಲಿಕ್ಕಾಗುತ್ತೆ ಎಂದರೆ, ನಿಮ್ಮ ವಿಚಾರದಲ್ಲಿ ನಾವು ಆಲೋಚಿಸಬೇಕಾಗುತ್ತದೆ.

ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಗ್ಗೆ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ. 

ನಂಜನಗೂಡು ದೇಗುಲ ಧ್ವಂಸ ವಿರೋಧಿಸಿ ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? ಯಾವ ತುಘಲಕ್ ಸರ್ಕಾರ ನಡೆಸ್ತಾ ಇದೀರಾ ನೀವು, ತಾಲಿಬಾನ್ ಸರ್ಕಾರ ಇದ್ಯಾ ಕರ್ನಾಟಕದಲ್ಲಿ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸ್ತಾ ಇದೀರ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಅವರ ಈ ಹೇಳಇಕೆ ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ.

ಈ ಹೇಳಿಕೆ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದಂತೆಯೇ ಕ್ಷಮೆಯಾಚಿಸಿದ್ದಾರೆ. ದೇಗುಲ ಧ್ವಂಸ ಘಟನೆಯಿಂದ ನೊಂದು ಸಿಟ್ಟಿನಿಂದ ಹೇಳಿದ್ದಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. 

ಇದೇ ವೇಳೆ ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಾಲಯವನ್ನು ಅನಧಿಕೃತ ಎನ್ನುವ ಅಧಿಕಾರ ನ್ಯಾಯಾಲಯಕ್ಕೆ ಇದೆಯೇ ಎಂದು ಪ್ರಶ್ನಿಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ದೇಗುಲ ಧ್ವಂಸ ಘಟನೆ ವಿರೋಧಿಸಿ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. 

ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com