ಖಾಸಗಿ ರೆಸಾರ್ಟ್‌ನಲ್ಲಿ ರೇವ್‌ ಪಾರ್ಟಿ: 11ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಖಾಕಿ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ ರೇವ್ ಪಾರ್ಟಿ ನಡೆದಿದ್ದು, ಪೊಲೀಸರು ದಾಳಿ ನಡೆಸಿ 11ಕ್ಕೂ ಜನರನ್ನು ವಶಕ್ಕೆ ಪಡೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ ರೇವ್ ಪಾರ್ಟಿ ನಡೆದಿದ್ದು, ಪೊಲೀಸರು ದಾಳಿ ನಡೆಸಿ 11ಕ್ಕೂ ಜನರನ್ನು ವಶಕ್ಕೆ ಪಡೆದಿದ್ದಾರೆ.

ರೇವ್‌ ಪಾರ್ಟಿ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರ ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಡ್ರಗ್ಸ್ ನಶೆಯಲ್ಲಿದ್ದ ಕೆಲ ಯುವಕ, ಯುವತಿಯರು ಪರಾರಿಯಾಗಿದ್ದಾರೆ. ಈ ಪೈಕಿ ಸದ್ಯ ಡ್ರಗ್ಸ್ ನಶೆಯಲ್ಲಿದ್ದ 11ಕ್ಕೂ ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರೇವ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದು, ಮ್ಯೂಸಿಕ್ ಕಂಪನಿಯೊಂದು ಈ ಪಾರ್ಟಿ ಆಯೋಜಿಸಿತ್ತು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com