ಬೆಂಗಳೂರಿನ ಪ್ರಮುಖ ಕಟ್ಟಡಗಳ ಫೋಟೋ ಕ್ಲಿಕ್ಕಿಸುತ್ತಿದ್ದವ ಸಿಸಿಬಿ ಬಲೆಗೆ

ನಗರದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತಾನು ತೆಗೆದ ಫೋಟೋಗಳನ್ನು ವಿದೇಶಿ ಏಜೆನ್ಸಿಗಳಿಗೆ ಕಳುಹಿಸುತ್ತಿದ್ದ ಎಂಬ ಮಿಲಿಟರಿ ಇಂಟೆಲಿಜೆನ್ಸ್ ನೀಡಿದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದೇಶದ ಬಹುತೇಕ ಏಜೆನ್ಸಿಗಳಿಗೆ ಭಯೋತ್ಪಾದಕರ ಸಂಪರ್ಕವಿರುವುದರಿಂದ ನಗರದ ಪ್ರಮುಖ ಡಿಫೆನ್ಸ್ ಸೇರಿ ಹಲವು ಮಾಹಿತಿ ಸೋರಿಕೆಯಾದರೆ ಅಪಾಯ ವಿರುತ್ತದೆ. ಹೀಗಾಗಿ ಬಂಧಿತ ಯಾವ ಏಜೆನ್ಸಿಗಳಿಗೆ ಮಾಹಿತಿ ರವಾನಿಸುತ್ತಿದ್ದ ಎಂಬುದರ ಕುರಿತು ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸದ್ಯ ಆರೋಪಿಯ ವಿರುದ್ಧ ಅಫೀಷಿಯಲ್ ಸೀಕ್ರೆಟ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com