ಬೆಂಗಳೂರು: ತೈಲ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ

ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.
ಸೈಕಲ್ ಜಾಥಾದಲ್ಲಿ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮತ್ತಿತರು ಭಾಗಿಯಾದ ಚಿತ್ರ
ಸೈಕಲ್ ಜಾಥಾದಲ್ಲಿ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮತ್ತಿತರು ಭಾಗಿಯಾದ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.

 ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧವರೆಗೂ ನಡೆದ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಳಿಕ ವಿಧಾನಸೌಧದ ಹೊರ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪಿಕ್ ಪಾಕೆಟ್ ಸರ್ಕಾರ ಎಂದು ಆರೋಪಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಸರ್ಕಾರ ಇಳಿಸಿಲ್ಲ, ಅಗತ್ಯ ವಸ್ತುಗಳ ಬೆಲೆಯನ್ನು ಶೇಕಡಾ 20 ರಷ್ಟು ಇಳಿಸಬೇಕೆಂದು ಬೇಡಿಕೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ, ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಇವೆಲ್ಲವನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ರೀತಿಯ ಸಂಕಟಪಡುವಂತಾಗಿದೆ. ಸಬ್ಸಿಡಿ ಕೂಡಾ ರದ್ದುಪಡಿಸಲಾಗಿದೆ. ಕೇಂದ್ರ ಸರ್ಕಾರ ತೆರಿಗೆಯನ್ನು ಕಡಿಮೆ ಮಾಡುತ್ತಿಲ್ಲ ಎಂದು ಆರೋಪಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com