ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಸಂಜಯ್ ನಗರ ಪೊಲೀಸ್ ಠಾಣೆ ಬಳಿ ಸಾರ್ವಜನಿಕರಿಂದ ಭಾರಿ ಪ್ರತಿಭಟನೆ

ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದ ಯುವಕನನ್ನು ನಮ್ಮ ಕೈಗೆ ಬಿಟ್ಟುಕೊಡಿ, ನಾವೇ ಆತನಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಆಗ್ರಹಿಸಿ ಸಾರ್ವಜನಿಕರು ಭಾರಿ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾರಿ ಪ್ರತಿಭಟನೆ
ಭಾರಿ ಪ್ರತಿಭಟನೆ

ಬೆಂಗಳೂರು: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದ ಯುವಕನನ್ನು ನಮ್ಮ ಕೈಗೆ ಬಿಟ್ಟುಕೊಡಿ, ನಾವೇ ಆತನಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಆಗ್ರಹಿಸಿ ಸಾರ್ವಜನಿಕರು ಭಾರಿ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಸಂಜಯನಗರ ಪೊಲೀಸ್‌ ಠಾಣೆಗೆ ನೂರಾರು ಜನರು ಮುತ್ತಿಗೆ ಹಾಕಿದ್ದು, ಆರೋಪಿಯನ್ನು ನಮಗೊಪ್ಪಿಸಿ.. ಆತನಿಗೆ ನಾವೇ ಶಿಕ್ಷೆ ನೀಡುತ್ತೇವೆ ಎಂದು ಆಗ್ರಹಿಸಿದ್ದಾರೆ. ಈ ವೇಳೆ ಪರಿಸ್ಥಿತಿ ಕೈ ಮೀರುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯ ಶಾಸಕ ಭೈರತಿ ಬಸವರಾಜು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದರು. ಆದರೆ ಅವರ ಮನವಿಗೂ ಬಗ್ಗದೇ ಪ್ರತಿಭಟನೆ ಮುಂದುವರಿಸಿದ್ದಾರೆ.

ಏನಿದು ಪ್ರಕರಣ?
ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈತನನ್ನು ಸಂಜಯ್ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಮಾಡುತ್ತಿದ್ದರು. ಈ ವಿಷಯ ಕಾಳ್ಗಿಚ್ಚಿನಂತೆ ಈ ಪ್ರದೇಶದಲ್ಲಿ ಹರಡಿತು. ತಕ್ಷಣ ಸ್ಥಳಕ್ಕೆ ಬಂದ ಸಾವಿರಾರು ಮಂದಿ ಸಾರ್ವಜನಿಕರು ಪೊಲೀಸ್ ಠಾಣೆ ಮುಂದೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನು ಕರೆದುಕೊಂಡು ಹೋಗಲು ಮುಂದಾದ ಪೊಲೀಸರ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಪೊಲೀಸ್ ಠಾಣೆ ಮುಂದೆ ಬಿಗುವಿನ ವಾತಾವರಣ ಕಂಡುಬರುತ್ತಿದ್ದು, ಪೊಲೀಸರು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತೆಗಾಗಿ ಕೆಎಸ್‍ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಕ್ಷಣ ಕ್ಷಣಕ್ಕೂ ಪ್ರತಿಭಟನಕಾರರು ಹೆಚ್ಚಾಗುತ್ತಿರೋ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ.

ಫಲಿಸದ ಅಧಿಕಾರಿಗಳ ಮನವೊಲಿಕೆ
ಇನ್ನು ಇನ್ಸ್‌ಪೆಕ್ಟರ್ ಬಾಲರಾಜ್ ಪ್ರತಿಭಟನಾಕಾರರನ್ನು ಮನವೋಲಿಸಲು ಪ್ರಯತ್ನ ಪಟ್ಟರೂ ಅವರ ಮಾತಿಗೆ ಸೊಪ್ಪು ಹಾಕದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿದ್ದು, ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಭೇಟಿ ನೀಡಿ ಮನವೊಲಿಕೆ ಯತ್ನ ಮುಂದುವರಿಸಿದ್ದಾರೆ. ಈ ನಡುವೆ ಪ್ರತಿಭಟನೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಠಾಣೆ ಮುಂದೆ ನಿಂತಿದ್ದವರನ್ನು ಚದುರಿಸುವ ಕೆಲಸಕ್ಕೆ ಮುಂದಾಗಿದ್ದು ಪ್ರತಿಭಟನಾಕಾರರನ್ನು ವಾಪಸ್‌ ಕಳುಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com