ಹೊಸಪೇಟೆ: ಹಂಪಿಯಲ್ಲಿ ಪ್ರವಾಸಿಗರ ದಂಡು, ಕೋವಿಡ್ ನಿಯಮ ಉಲ್ಲಂಘನೆ ಪರಿಶೀಲನೆಗೆ ಸಿಬ್ಬಂದಿಗಳ ನೇಮಕ

ವಿಶ್ವ ವಿಖ್ಯಾತ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಈ ನಡುವೆ ಸ್ಥಳಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದಕ್ಕೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಪೇಟೆ:  ವಿಶ್ವ ವಿಖ್ಯಾತ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಈ ನಡುವೆ ಸ್ಥಳಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದಕ್ಕೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 

ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನರು ದೂರು ದಾಖಲಿಸುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು, ನಿಯಮ ಉಲ್ಲಂಘಿಸುವವರ ಪರಿಶೀಲನೆ ನಡೆಸಲು ಸಿಬ್ಬಂದಿಗಳನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಕೊರೋನಾ ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ವೀಕೆಂಡ್‌ನಲ್ಲಿ ಪ್ರವಾಸಿಗರ ಭೇಟಿಗೆ ಹೇರಿದ್ದ ನಿರ್ಬಂಧವನ್ನು ಕೆಲ ದಿನಗಳ ಹಿಂದಷ್ಟೇ ಜಿಲ್ಲಾಡಳಿತ ಮಂಡಳಿ ಸಡಿಲಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವೀಕೆಂಡ್ ಸಂದರ್ಭದಲ್ಲಿ ಹಂಪಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. 

ಪ್ರವಾಸಿ ತಾಣದಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುವಂತೆ ಅಲ್ಲಲ್ಲಿ ಸೂಚನಾ ಫಲಕಗಳನ್ನು ಹಾಕಿದ್ದರೂ, ಪ್ರವಾಸಿಗರು ನಿಯಮ ಉಲ್ಲಂಘಿಸಿರುವುದಕ್ಕೆ ಸ್ಥಳೀಯ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 

ವಾರದ ಸಂಪೂರ್ಣ ದಿನ ಹಂಪಿ ತೆರೆಯಲು ಜಿಲ್ಲಾಡಳಿತ ಮಂಡಳಿ ನಿರ್ಧರಿಸುವುದು ಆತಂಕವನ್ನುಂಟು ಮಾಡಿದ. ವೀಕೆಂಡ್ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ 3,000ಕ್ಕೆ ತಲುಪುತ್ತಿದೆ. ಸಾಕಷ್ಟು ಜನರು ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡು ಬರುತ್ತಿದೆ ಎಂದು ಸ್ಥಳೀಯ ನಿವಾಸಿ ಪ್ರಭು ಭಟ್ ಅವರು ಹೇಳಿದ್ದಾರೆ.

ಹಂಪಿಯಲ್ಲಿರುವ ಭದ್ರತಾ ಪಡೆಗಳೊಂದಿಗೆ ಸ್ವಯಂ ಸೇವಕರ ನಿಯೋಜನೆ ಪ್ರವಾಸಿಗರ ಮೇಲೆ ಕಣ್ಗಾವಲಿಡಲು ಮತ್ತಷ್ಟು ಸಹಾಯವಾಗಲಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ. 

ಪ್ರವಾಸಿಗರು ಕೋವಿಡ್ ನಿಯಮ ಪಾಲನೆ ಮಾಡದಿರುವುದು ಕಂಡು ಬಂದಿದ್ದೇ ಆದರೆ, ಅವರಿಗೆ ದಂಡ ವಿಧಿಸುವ ಕೆಲಸವನ್ನು ಈ ಸಿಬ್ಬಂದಿಗಳು ಮಾಡುತ್ತಾರೆ. ಸ್ವಯಂ ಸೇವೇಕರು ವಿಜಯ ವಿಟ್ಠಲ ದೇವಾಲಯ, ವಿರೂಪಾಕ್ಷ ದೇವಾಲಯ, ಉಗ್ರ ನರಸಿಂಹ ಮತ್ತು ಇತರೆ ಸ್ಮಾರಕಗಳಲ್ಲಿ ಭದ್ರತಾ ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com