ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಪ್ರಸ್ತುತ ಹಿಮಾಚಲ ಪ್ರದೇಶ ನ್ಯಾಯಮೂರ್ತಿಯಾಗಿದರುವ ಕರ್ನಾಟಕದ ಆರ್.ವಿ. ಮಳಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಕರ್ನಾಕಟ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ ಎಸ್‌ ಓಕಾ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಾಧೀಶರಾಗಿ ಬಡ್ತಿ ನೀಡಿದ ಬಳಿಕ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಶಿಫಾರಸು ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com