ಧಾರವಾಡ ಆರೋಗ್ಯ ಸಿಬ್ಬಂದಿಗಳ ಆತ್ಮಹತ್ಯೆ ಯತ್ನ: ಹೆಚ್ಚಿದ ಆತಂಕ, ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ

ಧಾರವಾಡ ಆರೋಗ್ಯ ಸಿಬ್ಬಂದಿಗಳು ಪದೇ ಪದೇ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೂಚಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಧಾರವಾಡ ಆರೋಗ್ಯ ಸಿಬ್ಬಂದಿಗಳು ಪದೇ ಪದೇ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೂಚಿಸಿದ್ದಾರೆ.

ಕಳೆದ ವಾರದಲ್ಲಿ, ಹಿರಿಯ ಅಧಿಕಾರಿಗಳ ಕಿರುಕುಳದಿಂದ ನರ್ಸ್, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಕರು ಮತ್ತು ಕಿಮ್ಸ್ ಆಸ್ಪತ್ರೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್, ಮೂವರೂ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿರಿಯ ಆರೋಗ್ಯ ಅಧಿಕಾರಿಗಳ ಕಿರುಕುಳವೆಂದು ಆರೋಪಿಸಿ, ಹುಬ್ಬಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಸೆಪ್ಟೆಂಬರ್ 16 ರಂದು ಆಸ್ಪತ್ರೆಯ ಆವರಣದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು, ಆದರೆ ಆಕೆಯ ಸಹೋದ್ಯೋಗಿಗಳು ಆಕೆಯನ್ನು ರಕ್ಷಿಸಿದರು. ಸೋಮವಾರ, ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಕಿರುಕುಳದಿಂದ ಆರೋಗ್ಯ  ನಿರೀಕ್ಷಕರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸೋಮವಾರ ಸಂಜೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯೊಬ್ಬರು ಸ್ವಚ್ಛತಾ ವಿಭಾಗದಲ್ಲಿನ ಮೇಲಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com