ಬೆಂಗಳೂರಿನಲ್ಲಿ ಅರ್ಚಕನ ಮೇಲೆ ಹಲ್ಲೆ: ನಗ-ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿ
ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.
Published: 23rd September 2021 10:38 AM | Last Updated: 23rd September 2021 11:29 AM | A+A A-

ಸಾಂಕೇತಿಕ ಚಿತ್ರ
ಬೆಂಗಳೂರು: ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.
ಸೆಪ್ಟೆಂಬರ್ 20ರಂದು ನಡೆದ ಪ್ರಕರಣ ಇಂದು ಬೆಳಕಿಗೆ ಬಂದಿದ್ದು ಮಾಜಿ ಸಚಿವ ಆರ್ ಶಂಕರ್ ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಿ ಮುಗಿಸಿ ಹಿಂತಿರುಗುತ್ತಿದ್ದ ಅರ್ಚಕ ಮಣಿಕಂಠ ಶರ್ಮ ಎಂಬುವವರ ಮೇಲೆ ಹೆಣ್ಣೂರು ಅಂಡರ್ ಪಾಸ್ ಬಳಿ ದುಷ್ಕರ್ಮಿಗಳು ತಡೆದು ನಿಲ್ಲಿಸಿ ಹಲ್ಲೆ ಮಾಡಿದ್ದಾರೆ.ಅರ್ಚಕರು ಕಲ್ಯಾಣನಗರದಿಂದ ಬರುತ್ತಿದ್ದರು.
ಈ ವೇಳೆ ಅರ್ಚಕ ಮಣಿಕಂಠ ಶರ್ಮ ಅವರ ದೇಹದಲ್ಲಿದ್ದ ಸುಮಾರು 60 ಗ್ರಾಂ ಚಿನ್ನ ಮತ್ತು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ.
ದರೋಡೆಕೋರರಿಂದ ತಪ್ಪಿಸಿಕೊಂಡು ಬಂದ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.