ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ನಿಗೂಢ ಸ್ಫೋಟಕ್ಕೆ ಇಬ್ಬರು ಬಲಿ, ಐವರಿಗೆ ಗಾಯ
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Published: 23rd September 2021 01:00 PM | Last Updated: 23rd September 2021 03:37 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಅಕ್ಕಪಕ್ಕ ನಿಲ್ಲಿಸಿದ್ದ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತರಗುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.
FSL team inspected the spot that killed three after explosion took place near New Taragupete in Chamarajapete on Thursday.
Video by @vinodkumart5@NewIndianXpress @santwana99 pic.twitter.com/cy9Q8y0iqn— TNIE Karnataka (@XpressBengaluru) September 23, 2021
ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ, ಸ್ಥಳೀಯರಲ್ಲಿ ತೀವ್ರ ಆತಂಕ ಮನೆಮಾಡಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿವೆ.
Karnataka: Two people killed, three others injured in a blast at a firecracker storage facility in New Tharagupet area of Bengaluru earlier today, says DCP (South) Harish Pandey pic.twitter.com/QykVUFXtWF
— ANI (@ANI) September 23, 2021