ತೆರಿಗೆ ವಂಚಕರಿಗೆ ನೋಟಿಸ್ ನೀಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಲಯದಲ್ಲಿನ ಆಸ್ತಿ ತೆರಿಗೆ ವಂಚಕರಿಗೆ ನೋಟಿಸ್ ನೀಡಿ, ಕೂಡಲೇ ತೆರಿಗೆ ಸಂಗ್ರಹಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಅವರು ಗುರುವಾರ ಸೂಚನೆ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಲಯದಲ್ಲಿನ ಆಸ್ತಿ ತೆರಿಗೆ ವಂಚಕರಿಗೆ ನೋಟಿಸ್ ನೀಡಿ, ಕೂಡಲೇ ತೆರಿಗೆ ಸಂಗ್ರಹಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಅವರು ಗುರುವಾರ ಸೂಚನೆ ನೀಡಿದ್ದಾರೆ. 

ನಿನ್ನೆಯಷ್ಟೇ ತೆರಿಗೆ ಸಂಗ್ರಹ ಗುರಿ ತಲುಪಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕಂದಾಯ ವಿಭಾಗದ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಸಭೆ ನಡೆಸಿದರು.

ಅನೇಕ ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ವಲಯವಾರು ಪಟ್ಟಿ ತಯಾರಿಸಬೇಕು. ಕಂದಾಯ ಅಧಿಕಾರಿಗಳು ಹಾಗೂ ಸಹಾಯಕ ಕಂದಾಯ ಅಧಿಕಾರಿಗಳು ಎಲ್ಲಾ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ವಾರ್ಡ್ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು. 

4000 ಕೋಟಿ ತೆರಿಗೆ ಸಂಗ್ರಹಕ್ಕೆ ಪಾಲಿಕೆ ಗುರಿ
ಪ್ರಸಕ್ತ ಸಾಲಿನಲ್ಲಿ ರೂ.4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿಯಿದೆ. ಸೆ.22ರ ವರೆಗೆ ರೂ.2.141 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಉಳಿದ ರೂ.1.858 ಕೋಟಿ ತೆರಿಗೆ ಸಂಗ್ರಹಕ್ಕೆ ಅಧಿಕಾರಿಗಳು ಶ್ರಮಿಸಬೇಕು. ಹಲವು ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಂದ ತೆರಿಗೆ ವಸೂಲಿಗೆ ಆದ್ಯತೆ ನೀಡಬೇಕೆಂದು ತಿಳಿಸಿದರು. 

ದಾಖಲೆಗಳ ಪ್ರಕಾರ, ಆರ್ ಆರ್ ನಗರ ವಲಯದಿಂದ ಗರಿಷ್ಠ ತೆರಿಗೆ ಒಟ್ಟು 149.12 ಕೋಟಿ ರೂ. (56.74 ಶೇಕಡಾ) ಸಂಗ್ರಹವಾಗಿದ್ದು, ಮಹದೇವಪುರ ವಲಯದಿಂದ ಅತಿ ಹೆಚ್ಚು ಮೊತ್ತ 542.14 ಕೋಟಿ ಸಂಗ್ರಹಿಸಲಾಗಿದೆ. ಈ ನಡುವೆ, ಬಿಬಿಎಂಪಿ ಗುರುವಾರ ಆದರ್ಶ ರಿಯಾಲಿಟಿ ಮತ್ತು ಹೋಟೆಲ್ ಪ್ರೈವೇಟ್ ಲಿಮಿಟೆಡ್‌ನಿಂದ 20,711,970 ರೂಪಾಯಿ ತೆರಿಗೆ ಮತ್ತು ದಂಡದ ಮೊತ್ತವನ್ನು ಸಂಗ್ರಹಿಸಿದೆ ಎಂದು ತಿಳಿದುಬಂದಿದೆ. 

ಸಭೆಯಲ್ಲಿ ವಿಶೇಷ ಆಯುಕ್ತರ (ಕಂದಾಯ) ಎಸ್. ಬಸವರಾಜು, ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಭಾಗವಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com