ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಸೇರಿ 8 ವಿಧೇಯಕಗಳಿಗೆ ಮೇಲ್ಮನೆ ಅಂಗೀಕಾರ

ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಧನ ವಿನಿಯೋಗ ವಿಧೇಯಕ ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಸೇರಿದಂತೆ 8 ವಿಧೇಯಕಗಳು ಮೇಲ್ಮನೆಯಲ್ಲಿ ಅಂಗೀಕಾರಗೊಂಡಿದೆ.
ಕರ್ನಾಟಕ ವಿಧಾನ ಪರಿಷತ್
ಕರ್ನಾಟಕ ವಿಧಾನ ಪರಿಷತ್

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಧನ ವಿನಿಯೋಗ ವಿಧೇಯಕ ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಸೇರಿದಂತೆ 8 ವಿಧೇಯಕಗಳು ಮೇಲ್ಮನೆಯಲ್ಲಿ ಅಂಗೀಕಾರಗೊಂಡಿದೆ.

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ ವಿಧೇಯಕ 2021, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವಿಧೇಯಕ 2020-21, ಕರ್ನಾಟಕ ಪೌರ ಸಭೆಗಳು ಮತ್ತು ಕೆಲವು ಇತರ ಕಾನೂನು ವಿಧೇಯಕ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ 2021, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಮೇಲ್ಮನೆಯಲ್ಲಿ ಅಂಗೀಕಾರಗೊಂಡಿದೆ.

ರಾಜ್ಯದಲ್ಲಿ ಜೂಜಾಟ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಈ ಹಿಂದೆ ಮಂಗಳವಾರದಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆನ್ ಲೈನ್ ಹಾಗೂ ಇತರ ಜೂಜು ತಡೆಯುವ ನಿಟ್ಟಿನಲ್ಲಿ ಈ ವಿಧೇಯಕ ಮಹತ್ವ ಪಡೆದುಕೊಂಡಿತ್ತು. ಇದೀಗ ಮೇಲ್ಮನೆಯಲ್ಲೂ ಈ ಮಸೂದೆ ಅಂಗೀಕಾರಗೊಂಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com