ರಾಜ್ಯ ಹೈಕೋರ್ಟ್ ನ ಕಾಯಂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ನ್ಯಾಯಮೂರ್ತಿಗಳ ಪ್ರಮಾಣ ವಚನ
ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
Published: 25th September 2021 12:26 PM | Last Updated: 25th September 2021 12:26 PM | A+A A-

ನೂತನ ಹೆಚ್ಚುವರಿ ನ್ಯಾಯಮೂರ್ತಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣನವರ್, ಮಕ್ಕಿಮನೆ ಎಂ. ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವ ಕುಮಾರ್, ಪದ್ಮರಾಜ್ ನೇಮಿಚಂದ್ರ ದೇಸಾಯಿ, ಪಿ. ಕೃಷ್ಣಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಹೆಚ್ಚುವರಿ ನ್ಯಾಯಾಧೀಶರಿಗೆ ರಾಜಭವನದಲ್ಲಿ ಇಂದು ಆಯೋಜಿಸಲಾಗಿದ್ದ ನ್ಯಾಯಮೂರ್ತಿ ಪದವಿಯ ಪ್ರಮಾಣವಚನ ಬೋಧನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @BSBommai ಅವರು ಭಾಗವಹಿಸಿದ್ದರು. (1/2) pic.twitter.com/GeMyY2XkRu
— CM of Karnataka (@CMofKarnataka) September 25, 2021
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.