ಬೆಂಗಳೂರು: ದಾರಿಹೋಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್ ಗಳು ಸೇರಿ ಅವರ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸೆ.25 ರಂದು ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ಸರ್ಕಾರಿ ಶಾಲೆ ಕೌಂಪೌಂಡ್ ಬಳಿ ರಸ್ತೆಯಲ್ಲಿ ಪುಟ್ಟೇನಹಳ್ಳಿ ಹಾಗೂ ಕೆ ಪಿ ಅಗ್ರಹಾರ ರೌಡಿಶೀಟರ್ ಗಳು ತಮ್ಮ ಸಹಚರರೊಂದಿಗೆ ಸೇರಿ ದಾರಿಹೋಕರನ್ನು ಅಡ್ಡ ಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ದರೋಡೆ ಮಾಡಲು ಸಂಚು ರೂಪಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ನಾಲ್ವರು ಆರೋಪಿಗಳನ್ನು ಬಂಧಿಸಿ, ಒಂದು ರಿವಾಲ್ವರ್, 6 ಜೀವಂತ ಗುಂಡುಗಳು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.ಆರೋಪಿಗಳ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Advertisement