ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!

ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.
ಮಾದಿಗ ಸಮುದಾಯದ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುತ್ತಿರುವುದು.
ಮಾದಿಗ ಸಮುದಾಯದ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುತ್ತಿರುವುದು.

ತುಮಕೂರು: ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ತುಮಕೂರು ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿಗಳು ತುಮಕೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳದಲ್ಲೇ ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಿದರು. 

ತುಮಕೂರಿನಲ್ಲಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲು ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು. 

ಘಟನೆ ಸಂಬಂಧ ಮುಖ್ಯಮಂತ್ರಿಗಳಿಗೆ ಜೆಡಿಎಸ್ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದರು. ಆದರೆ, ಕಾರ್ಯಕರ್ತರ ಮನವಿ ಪಡೆಯದೇ ಹೊರಟ ಸಿಎಂಗೆ ರ್ಯಕರ್ತರು ಧಿಕ್ಕಾರ ಕೂಗಿದರು ಎಂದು ಹೇಳಲಾಗುತ್ತಿದೆ. 

ಆಗಸ್ಟ್ 24ರಂದು ತುಮಕೂರು ತಾಲೂಕಿನ ಚೋಟಾಸಾಬರಪಾಳ್ಯದಲ್ಲಿ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು. ಕ್ಯಾತ್ಸಂದ್ರ ಸಮೀಪದ ಹಿರೇಹಳ್ಳಿಯಲ್ಲಿ ದನ ಮೇಯಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ದುಷ್ಕರ್ಮಿಗಳು ತಲೆಮರೆಸಿಕೊಂಡಿದ್ದಾರೆ.

ಘಟನೆ ನಡೆದು (ಆ.24) ಒಂದು ತಿಂಗಳಾದರೂ ಆರೋಪಿಗಳನ್ನ ಪೊಲೀಸರು ಪತ್ತೆ ಮಾಡಿಲ್ಲ. 5 ಸಿಪಿಐ, 5 ಪಿಎಸ್​ಐ, 20ಕ್ಕೂ ಹೆಚ್ಚು ಪಿಎಸ್​ಐ ಅವರನ್ನೊಳಗೊಂಡ 70ಕ್ಕೂ‌ ಹೆಚ್ಚು ಪೊಲೀಸರ ತಂಡ ತನಿಖೆ ನಡೆಸುತ್ತಿದೆಯಾದರೂ ಆರೋಪಿಗಳ ಸಣ್ಣ ಸುಳಿವೂ ಸಿಕ್ಕಿಲ್ಲ.

ಈ ಪ್ರಕರಣ ಸಂಬಂಧ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ ಎಂದು ತಿಳಿದುಬಂದಿದೆ. 

ಈ ನಡುವೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಜಾತಿ ಪಟ್ಟಿಗೆ ಸ್ಪೃಶ್ಯರನ್ನು ಸೇರ್ಪಡೆ ಮಾಡಿರುವ ಕುರಿತು ಕೇಳಿಸುವ ಸ್ಪಷ್ಟನೆ ಕುರಿತ ನೋಟಿಸ್'ಗೆ ಕೂಡಲೇ ಉತ್ತರಿಸುವಂತೆ ಒತ್ತಾಯಿಸಿ ಹಾಗೂ ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com