ಶೋಚನೀಯ ಸ್ಥಿತಿಯಲ್ಲಿ ರಾಜ್ಯದ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳು: ಶಾಲೆ, ಪೊಲೀಸ್ ಸ್ಟೇಷನ್ ಗಳು ಆರೋಗ್ಯ ಸೇವೆಗೆ ಬಳಕೆ!

ಮಂಡ್ಯ ಜಿಲ್ಲೆಯ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ನಡೆಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಕರ್ನಾಟಕದ ವಿವಿಧ ಭಾಗಗಳಲ್ಲಿ ಇರುವ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಳಪೆ ಸ್ಥಿತಿ, ಆರೋಗ್ಯ ಸೇವೆಗಳು ಬಾಡಿಗೆ ಕೊಠಡಿಯಲ್ಲಿ...ಇದು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇತ್ತೀಚೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ(ಡಿಎಲ್ ಎಸ್
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಂಡ್ಯ ಜಿಲ್ಲೆಯ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ನಡೆಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಕರ್ನಾಟಕದ ವಿವಿಧ ಭಾಗಗಳಲ್ಲಿ ಇರುವ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಳಪೆ ಸ್ಥಿತಿ, ಆರೋಗ್ಯ ಸೇವೆಗಳು ಬಾಡಿಗೆ ಕೊಠಡಿಯಲ್ಲಿ...ಇದು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇತ್ತೀಚೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ(ಡಿಎಲ್ ಎಸ್ ಎ) ಕಾರ್ಯದರ್ಶಿ ಸದಸ್ಯರು ಭೇಟಿ ನೀಡಿದ್ದ ಸಂದರ್ಭದಲ್ಲಿ ಕಂಡುಬಂದ ದುಸ್ಥಿತಿ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಿದ್ದಪಡಿಸಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ, ರಾಜ್ಯದಲ್ಲಿರುವ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6 ಕೇಂದ್ರಗಳ ಪರಿಸ್ಥಿತಿ ಹದಗೆಟ್ಟಿದ್ದು, 6 ಅತ್ಯುತ್ತಮವಾಗಿದ್ದು, 67 ಉತ್ತಮ ಮತ್ತು 22 ಸಾಮಾನ್ಯ ಸ್ಥಿತಿಯಲ್ಲಿವೆ ಎಂದು ಹೇಳಿದೆ. 

ಮಂಡ್ಯ ಜಿಲ್ಲೆಯ ಶಂಕರಾಪುರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶಾಲೆಯೊಂದರ ಕೊಠಡಿಗಳಲ್ಲಿ ನಡೆಸಲಾಗುತ್ತಿದೆ. ಶಾಲೆಯ ಕಟ್ಟಡ, ಕೊಠಡಿ ಮತ್ತು ಗಾಳಿ ಬೆಳಕು ಪ್ರಾಥಮಿಕ ಆರೋಗ್ಯ ಕೇಂದ್ರ ನಡೆಸಲು ಬೇಕಾದ ಪೂರಕ ವಾತಾವರಣ ಅಲ್ಲಿಲ್ಲ. ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಾಡಿಗೆ ಕೊಠಡಿಯಲ್ಲಿ ನಡೆಸಲಾಗುತ್ತಿದ್ದು, ಇನ್ನು ನಾಲ್ಕು ಕೇಂದ್ರಗಳು ಧಾರವಾಡದಲ್ಲಿ ಪೊಲೀಸ್ ಕಚೇರಿಯಲ್ಲಿ ಇವೆ. ಮೈಸೂರಿನ ದೂರಾ ಗ್ರಾಮದಲ್ಲಿ, ತುಮಕೂರಿನ ಬೆಳ್ಳಾವಿಯಲ್ಲಿ ಮತ್ತು ಚಿಕ್ಕಮಗಳೂರಿನ ಹೀರೇಮಗಳೂರಿನಲ್ಲಿರುವ ಆರೋಗ್ಯ ಕೇಂದ್ರಗಳು ತೀರಾ ಹದಗೆಟ್ಟ ಸ್ಥಿತಿಯಲ್ಲಿವೆ. ಅವುಗಳ ಬಗ್ಗೆ ತಕ್ಷಣವೇ ಗಮನ ಹರಿಸಬೇಕಾದ ಪರಿಸ್ಥಿತಿಯಿದೆ ಎಂದು ವರದಿಯಲ್ಲಿ ಸೂಚಿಸಲಾಗಿದೆ.

ತಂಡ ಒಂದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಹ ಭೇಟಿ ನೀಡಿದ್ದು, ಹಲವು ಆರೋಗ್ಯ ಕೇಂದ್ರಗಳು ಭಾರತೀಯ ಸಾರ್ವಜನಿಕ ಆರೋಗ್ಯ ಗುಣಮಟ್ಟದ ಮಾನದಂಡವನ್ನು ಹೊಂದಿಲ್ಲ ಮತ್ತು ಮೂಲಭೂತ ಸ್ವಚ್ಛತೆ, ಶುಚಿತ್ವದ ಕೊರತೆಯನ್ನು ಎದುರಿಸುತ್ತಿವೆ ಎಂದು ವಿಶೇಷವಾಗಿ ಗಮನ ಸೆಳೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com