ಡಿಸೆಂಬರ್ ನಲ್ಲಿ  ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ- ಮುಖ್ಯಮಂತ್ರಿ ಬೊಮ್ಮಾಯಿ

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ: ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಿಟ್ಟು, ಅನುಮೋದನೆ ಪಡೆಯಲಾಗುವುದು. ಈಗಾಗಲೇ ಅನೇಕ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಡಿಸೆಂಬರ್ ಒಳಗಡೆ  ಸಾಧ್ಯವಿರುವ ಮತ್ತಷ್ಟು ಕಚೇರಿಗಳನ್ನು  ಸ್ಥಳಾಂತರ ಮಾಡಲಾಗುವುದು ಎಂದರು.

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಲಾಗಿದೆ. ಬಾಕಿ ಪಾವತಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಸಿಎಂ, ಕಬ್ಬು ಬೆಳೆಗಾರರಿಗೆ ಯಾವ ರೀತಿ ಸಹಾಯ ಮಾಡಬಹುದು ಎಂಬುದರ ಬಗ್ಗೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಅಪೆಕ್ಟ್ ಬ್ಯಾಂಕ್ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು. 

ಮಕ್ಕಳಲ್ಲಿ ವೈರಾಣು ಜ್ವರ ಹೆಚ್ಚಾಗಿರುವಂತೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ  ಮುಖ್ಯಮಂತ್ರಿ, ಪ್ರಾಥಮಿಕ ಆರೋಗ್ಯ ಕೇಂದ್ರವಾರು ಗಮನ ಇಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳುವಂತೆ ಸೂಚಿಸಲಾಗಿದೆ ಎಂದರು.

ಸರ್ಕಾರ ಟೇಕಾಫ್ ಆಗಿ ಬಹಳಷ್ಟು ದಿನವಾಗಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com