
ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.
ಮುಖ್ಯಮಂತ್ರಿ @BSBommai ಅವರು ಇಂದು ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣೆ, ಹುಬ್ಬಳ್ಳಿ-ಧಾರವಾಡ ಸಂಚಾರ ಪೊಲೀಸ್ ಠಾಣೆ, ಧಾರವಾಡದ ಅಳ್ನಾವರ ಪೊಲೀಸ್ ಠಾಣೆ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಿದರು. ನಂತರ, ಧಾರವಾಡ ಜಿಲ್ಲೆಯಲ್ಲಿ 4, ಹುಬ್ಬಳ್ಳಿ- ಧಾರವಾಡ ನಗರದಲ್ಲಿ 2 ಡಾಗ್ ಕೆನಲ್ ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. (1/2) pic.twitter.com/zLuVNhGS5y
— CM of Karnataka (@CMofKarnataka) September 27, 2021
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ ರಾಜ್ಯದ ಏಕೈಕ ಎಫ್‌ಎಸ್‌ಐಎಲ್ ಆಗಿರುವುದರಿಂದ ಬಹಳಷ್ಟು ಪ್ರಕರಣಗಳ ಸರದಿಯಲ್ಲಿರುವುದರಿಂದ ತನಿಖೆ ವಿಳಂಬವಾಗುತ್ತಿದೆ. ಹೀಗಾಗಿ ಈ ಒತ್ತಡವನ್ನು ಕಡಿಮೆಗೊಳಿಸಿ ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ಆರು ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ.
ಗೃಹ ಸಚಿವ @JnanendraAraga, ಶಾಸಕ @BelladArvind ಮತ್ತಿತರರು ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) September 27, 2021
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಕಸಬಾಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಆಯೋಜಿಸಿರುವ “ಕಸಬಾ ಪೇಟೆ ಪೊಲೀಸ್ ಠಾಣೆಯ ನೂತನ ಕಟ್ಟಡ ಕಾಮಗಾರಿ”ಗೆ, “ಹುಬ್ಬಳ್ಳಿ-ಧಾರವಾಡ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಕಾಮಗಾರಿ”ಗೆ, “ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸ್ ಠಾಣೆಯ ನೂತನ ಕಟ್ಟಡದ ಕಾಮಗಾರಿ”ಗೆ, “ಧಾರವಾಡ ಜಿಲ್ಲೆಯಲ್ಲಿ 4 ಡಾಗ್ ಕೆನಲ್” ಹಾಗೂ “ಹುಬ್ಬಳ್ಳಿ-ಧಾರವಾಡ ನಗರದಲ್ಲಿ 2 ಡಾಗ್ ಕೆನಲ್‍ಗಳ ನಿರ್ಮಾಣ ಕಾಮಗಾರಿ”ಗೆ ಚಾಲನೆ ನೀಡಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ. ಅದರಂತೆ ಮೊದಲ ಹಂತದಲ್ಲಿ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಲ್ಯಾಬ್‌ಗಳನ್ನು ತೆರೆಯುವುದಾಗಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಹೊಸ ಸಂಶೋಧನೆ, ಅಭಿವೃದ್ಧಿ ನೀತಿ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ
ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಾಸಕ ಅರವಿಂದ್ ಬೆಲ್ಲದ್ ಮತ್ತಿತರರು ಉಪಸ್ಥಿತರಿದ್ದರು.