ರಾಜ್ಯದಲ್ಲಿ ಜನರೇಟರ್‌ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಅಳವಡಿಕೆ ಕಡ್ಡಾಯ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಡೀಸೆಲ್ ಜನರೇಟರ್(ಡಿಜಿ) ಸೆಟ್ ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ...
Published: 27th September 2021 02:03 PM | Last Updated: 27th September 2021 02:03 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಡೀಸೆಲ್ ಜನರೇಟರ್(ಡಿಜಿ) ಸೆಟ್ ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಅಳವಡಿಕೆ ಕಡ್ಡಾಯಗೊಳಿಸಿದೆ.
ವಿವಿಧ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಎಲ್ಲಾ ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದ ಹಿನ್ನಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಕೇಂದ್ರ ಸರ್ಕಾರದ ಪ್ರಕಾರ, ವಾಹನಗಳು, ಡಿಜಿ ಸೆಟ್‌ಗಳು, ಕಟ್ಟಡ ನಿರ್ಮಾಣದ ಧೂಳು ವಾಯು ಮಾಲಿನ್ಯದ ಪ್ರಮುಖ ಮೂಲಗಳಾಗಿವೆ. ಹೀಗಾಗಿ
ಕೆಎಸ್‌ಪಿಸಿಬಿ ಎಲ್ಲಾ ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು, ಯೋಜನಾ ತಾಣಗಳು, ವಿಮಾನ ನಿಲ್ದಾಣಗಳು, ರೈಲ್ವೆ, ಬಸ್ ನಿಲ್ದಾಣಗಳು ಸೇರಿದಂತೆ ಇತರೆ ಸ್ಥಳಗಳಲ್ಲಿ ಬಳಸುತ್ತಿರುವ ಡಿಜಿ ಸೆಟ್‌ಗಳಿಗೆ ಕಡ್ಡಾಯವಾಗಿ ಮಾಲಿನ್ಯ ನಿಯಂತ್ರಣ ಸಾಧನ ಅಳವಡಿಸುವಂತೆ ಸೂಚಿಸಿದೆ.
ಹೊಗೆ ಹೊರಸೂಸುವಿಕೆ ನಿಯಂತ್ರಣ ಸಾಧನವು ಮಂಡಳಿಯ ಪ್ಯಾರಾಮೀಟರ್‌ಗಳನ್ನು ಪೂರೈಸಬೇಕು ಮತ್ತು ಇದು ಕಣಗಳ ವಸ್ತುವನ್ನು ಪರೀಕ್ಷಿಸಬೇಕು ಮತ್ತು ಸಾಧನದ ಇಂಧನ ದಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.
ಈ ಸಾಧನ ಮತ್ತು ಡಿಜಿ ಸೆಟ್, ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ಭಾರತ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್, ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಆಟೋಮೋಟಿವ್ ಟೆಕ್ನಾಲಜಿ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಅಭಿವೃದ್ಧಿ ಕೇಂದ್ರದಿಂದ ಅನುಮತಿ ಪಡೆದಿರಬೇಕು ಮತ್ತು ಐಎಸ್‌ಒ ಪ್ರಮಾಣಪತ್ರ ಪಡೆದಿರುಬೇರು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.