ರಾಜ್ಯದಲ್ಲಿ ಕೊರೋನಾ ತುಸು ಏರಿಕೆ: ಬೆಂಗಳೂರಿನಲ್ಲಿ 229 ಸೇರಿ 629 ಕೇಸ್ ಪತ್ತೆ; 17 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 629 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಟೆಸ್ಟಿಂಗ್ (ಸಂಗ್ರಹ ಚಿತ್ರ)
ಕೋವಿಡ್-19 ಟೆಸ್ಟಿಂಗ್ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 629 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,763ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 229 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,900ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 782 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,24,102ಕ್ಕೆ ಏರಿಕೆಯಾಗಿದೆ. ಇನ್ನು12,634 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 93,014 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 629 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.67ಕ್ಕೆ ಇಳಿದಿದೆ.

ರಾಜ್ಯದಲ್ಲಿ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com