ಬೆಂಗಳೂರು: ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿಗೆ ಹೊತ್ತಿಕೊಂಡ ಬೆಂಕಿ; ಅದೃಷ್ಟವಶಾತ್ ಚಾಲಕ ಪಾರು
ಸಿಲಿಕಾನ್ ಸಿಟಿಯಲ್ಲಿ ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿನಲ್ಲಿ ಏಕಾಏಕೀ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
Published: 28th September 2021 06:00 PM | Last Updated: 28th September 2021 08:44 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿನಲ್ಲಿ ಏಕಾಏಕೀ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಗರದ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಬಸ್ತಿ ಸಮೀಪ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ
ನಟರಾಜ್ (29) ಎಂಬುವವರು ಕಾರು ಚಲಾಯಿಸುತ್ತಿದ್ದರು. ಕಾರಿನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೇತುಕೊಂಡ ಅವರು ಸುರಕ್ಷಿತವಾಗಿ ಕಾರಿನಿಂದ ಕೆಳಗಿಳಿದಿದ್ದಾರೆ. ಕೂಡಲೇ ನಾಗರಭಾವಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ತೆರಳಿದ್ದರು. ಅಷ್ಟರಲ್ಲೇ ಕಾರು ಸುಟ್ಟುಕರಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗರಾಜ್ ಅವರು ತಮ್ಮ ಸಂಬಂಧಿಕರನ್ನು ಭೇಟಿಯಾಗಲು ಉತ್ತರಹಳ್ಳಿಯಿಂದ ದೊಡ್ಡಬಸ್ತಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿದೆ ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ಸದ್ಯ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.