ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಜ್ಯದಲ್ಲಿ ಕೊರೋನಾ ತುಸು ಇಳಿಕೆ: ಬೆಂಗಳೂರಿನಲ್ಲಿ 239 ಸೇರಿ 539 ಕೇಸ್ ಪತ್ತೆ; 17 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 539 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,75,067ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 539 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,75,067ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,780ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 239 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,900ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 591 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,24,693ಕ್ಕೆ ಏರಿಕೆಯಾಗಿದೆ. ಇನ್ನು12,565 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,115,38 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 539 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.48ಕ್ಕೆ ಇಳಿದಿದೆ.

Related Stories

No stories found.

Advertisement

X
Kannada Prabha
www.kannadaprabha.com