ಟೋಯಿಂಗ್ ಮಾಡಿದ್ದ ವಾಹನ ಬಿಡಲು 800 ರೂ ಲಂಚಕ್ಕೆ ಬೇಡಿಕೆ; ಟೋಯಿಂಗ್ ಸಿಬ್ಬಂದಿ ವಶಕ್ಕೆ

ಜಯನಗರ ಸಂಚಾರಿ ಠಾಣೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಟೋಯಿಂಗ್ ಮಾಡಿದ್ದ ದ್ವಿಚಕ್ರ ವಾಹನವನ್ನು ಮರಳಿ ನೀಡಲು 800 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಜಯನಗರ ಸಂಚಾರಿ ಠಾಣೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಟೋಯಿಂಗ್ ಮಾಡಿದ್ದ ದ್ವಿಚಕ್ರ ವಾಹನವನ್ನು ಮರಳಿ ನೀಡಲು 800 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ. 

ಸೆಪ್ಟೆಂಬರ್ 25ರಂದು ಜೆ.ಪಿ.ನಗರದಲ್ಲಿ ನಿಲ್ಲಿಸಿದ್ದ ಬೈಕ್ ಟೋಯಿಂಗ್ ಮಾಡಲಾಗಿತ್ತು. ಠಾಣೆಗೆ ಹೋಗಿ ವಿಚಾರಿಸಿದಾಗ ಆರೋಪಿ 800 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಟೋಯಿಂಗ್ ಸಿಬ್ಬಂದಿ ಶುಲ್ಕ ಕಟ್ಟಿದರೆ 1,500 ರೂಪಾಯಿ ಆಗುತ್ತದೆ. ನಮಗೆ 800 ರೂ. ಲಂಚ ನೀಡಿದರೆ ಬಿಡುವುದಾಗಿ ಹೇಳಿದ್ದ. ಸದ್ಯ ಟೋಯಿಂಗ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿರುವ ಎಸಿಬಿ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರದ ಬಗ್ಗೆ ತನಿಖೆ ನಡೆಸಲಿದೆ.

ಏನಿದು ಘಟನೆ?
ಜಯನಗರ ಸಂಚಾರಿ ಠಾಣೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಟೋಯಿಂಗ್ ಮಾಡಿದ್ದ ದ್ವಿಚಕ್ರ ವಾಹನ ಬಿಡುವುದಕ್ಕೆ 800 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ. ಸೆಪ್ಟೆಂಬರ್ 25ರಂದು ಜೆ.ಪಿ.ನಗರದಲ್ಲಿ ನಿಲ್ಲಿಸಿದ್ದ ಬೈಕ್ ಟೋಯಿಂಗ್ ಮಾಡಲಾಗಿತ್ತು. ಠಾಣೆಗೆ ಹೋಗಿ ವಿಚಾರಿಸಿದಾಗ ಆರೋಪಿ 800 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಟೋಯಿಂಗ್ ಸಿಬ್ಬಂದಿ ಶುಲ್ಕ ಕಟ್ಟಿದರೆ 1,500 ರೂಪಾಯಿ ಆಗುತ್ತದೆ. ನಮಗೆ 800 ರೂ. ಲಂಚ ನೀಡಿದರೆ ಬಿಡುವುದಾಗಿ ಹೇಳಿದ್ದ. ಸದ್ಯ ಟೋಯಿಂಗ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿರುವ ಎಸಿಬಿ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರದ ಬಗ್ಗೆ ತನಿಖೆ ನಡೆಸಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com