ಗುತ್ತಿಗೆ ಸಿಬ್ಬಂದಿಗೆ ನೀಡದ ವೇತನ: ಬಿಬಿಎಂಪಿ ವಿರುದ್ಧ ಮಾಜಿ ಮೇಯರ್ ವಾಗ್ದಾಳಿ

ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಪಾಲಿಕೆಯ ಗುತ್ತಿಗೆ ಸಿಬ್ಬಂದಿ ವೇತನ ನೀಡುತ್ತಿಲ್ಲ, ಮತ್ತು ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಎನ್ ಆರ್ ರಮೇಶ್ ಆರೋಪಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಪಾಲಿಕೆಯ ಗುತ್ತಿಗೆ ಸಿಬ್ಬಂದಿ ವೇತನ ನೀಡುತ್ತಿಲ್ಲ, ಮತ್ತು ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಎನ್ ಆರ್ ರಮೇಶ್ ಆರೋಪಿಸಿದ್ದಾರೆ.

ಪ್ರಸ್ತುತ ಪಾಲಿಕೆಯ ಸಾವಿರಾರು ಮಂದಿ ಗುತ್ತಿಗೆದಾರರು ಕಳೆದ ಎರಡೂವರೆ ವರ್ಷಗಳಿಂದಲೂ ತಮ್ಮ ಪಾಲಿನ ಹಣ ಬಿಡುಗಡೆಗೆ ಸರದಿ ಸಾಲಿನಲ್ಲಿ ಜ್ಯೇಷ್ಠತೆಯ ನಿಯಮಗಳಿಗೆ ಅನುಗುಣವಾಗಿ ಕಾಯುತ್ತಿದ್ದರೂ ಸಹ, ಅವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಹಿರಿತನವಿಲ್ಲದ ಗುತ್ತಿಗೆದಾರರಿಗೆ ನಿಯಮ ಬಾಹಿರವಾಗಿ ಜ್ಯೇಷ್ಠತೆ ನಿಯಮಗಳನ್ನು ಗಾಳಿಗೆ ತೂರಿ, ಸುಮಾರು 69 ಕೋಟಿ ರೂಪಾಯಿಗಳಷ್ಟು ಹಣವನ್ನು ಕೇವಲ ಕಳೆದ ಮೂರೂವರೆ ತಿಂಗಳ ಅವಧಿಯಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ರಮೇಶ್.ಎನ್.ಆರ್ ಹೇಳಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿಗಳಿಗೆ ಈ ಸಂಬಂಧ ಸಂಪೂರ್ಣ ದಾಖಲೆಗಳ ಸಹಿತ ದೂರನ್ನು ನೀಡಿದ್ದು, ಕೂಡಲೇ ಗೌರವ್ ಗುಪ್ತ ರವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಗೌರವ್ ಗುಪ್ತ ರವರನ್ನು ಪಾಲಿಕೆಯ ಮುಖ್ಯ ಆಯುಕ್ತರ ಸ್ಥಾನದಿಂದ ಬದಲಿಸುವಂತೆ ಆಗ್ರಹಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ರಮೇಶ್.ಎನ್.ಆರ್ ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಸಾಂಕ್ರಾಮಿಕದ ಹೊರತಾಗಿಯೂ, 909.52 ಕೋಟಿಗಳನ್ನು ವಿವಿಧ ಯೋಜನೆಗಳಿಗೆ ನೀಡಲಾಗಿದೆ, ಮತ್ತು ಏಪ್ರಿಲ್ 2021 ರಿಂದ ಇಲ್ಲಿಯವರೆಗೆ, 625.52 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ವಾರ, 289 ಕೋಟಿ ರೂಪಾಯಿಗಳನ್ನು ವಿವಿಧ ಕೆಲಸಗಳಿಗಾಗಿ ಬಿಡುಗಡೆ ಮಾಡಲಾಗಿದೆ. ಈ ವರ್ಷ ಬಿಡುಗಡೆಯಾದ ಹಣವು ಹಿಂದಿನ ಅವಧಿಯಲ್ಲಿ ನೀಡಿದ್ದಕ್ಕಿಂತ ಹೆಚ್ಚಾಗಿದೆ ಎಂದು ಬಿಬಿಎಂಪಿ ಸ್ಫಷ್ಟನೆ ನೀಡಿದೆ.

ಏಪ್ರಿಲ್ 2021 ರವರೆಗೆ ರೂ 441.56 ಕೋಟಿ ಮತ್ತು ಏಪ್ರಿಲ್ 2021 ರಿಂದ ಇಲ್ಲಿಯವರೆಗೆ ರೂ 245.22 ಕೋಟಿ ಬಿಡುಗಡೆ ಮಾಡಲಾಗಿದೆ. ಕೋವಿಡ್ ಕೇರ್ ಕೇಂದ್ರಗಳು (ಸಿಸಿಸಿ), ಸ್ಮಶಾನ, ಆಸ್ಪತ್ರೆಗಳು, ಡಯಾಲಿಸಿಸ್ ಕೇಂದ್ರಗಳು, ಕುಡಿಯುವ ನೀರಿನ ಸೌಲಭ್ಯ ಮತ್ತು ಇತರ ಎಲ್ಲಾ ಕೆಲಸಗಳಿಗೆ ಸಂಬಂಧಿಸಿದ ಎಲ್ಲಾ ಬಿಲ್‌ಗಳನ್ನು ಪಾವತಿಸಲಾಗಿದೆ ಎಂದು ಎನ್ ಆರ್ ರಮೇಶ್ ಆರೋಪಕ್ಕೆ ಬಿಬಿಎಂಪಿ ಸ್ಪಷ್ಟೀಕರಣ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com