ಅರಸಿಕೆರೆ ಜಂಕ್ಷನ್ ನಲ್ಲಿ ರೈಲು ಬೋಗಿಗಳಿಗೆ ಬೆಂಕಿ

ಕೊರೋನಾ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳಿಗೆ ಅರಸಿಕೆರೆ ಜಂಕ್ಷನ್ ನಲ್ಲಿ ಬೆಂಕಿ ಹೊತ್ತುಕೊಂಡಿದೆ.
ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿರುವ ದೃಶ್ಯ (ಸಂಗ್ರಹ ಚಿತ್ರ)
ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿರುವ ದೃಶ್ಯ (ಸಂಗ್ರಹ ಚಿತ್ರ)

ಹಾಸನ: ಕೊರೋನಾ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳಿಗೆ ಅರಸಿಕೆರೆ ಜಂಕ್ಷನ್ ನಲ್ಲಿ ಬೆಂಕಿ ಹೊತ್ತುಕೊಂಡಿದೆ. 

ಮಂಗಳವಾರ ರಾತ್ರಿ ಈ ಘಟನೆ ವರದಿಯಾಗಿದ್ದು, ಸೂಕ್ತ ಸಮಯಕ್ಕೆ ಅಗ್ನಿಶಾಮಕ ಪಡೆ ಆಗಮಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುವುದಕ್ಕೂ ಮುನ್ನ ಬೆಂಕಿಯನ್ನು ನಂದಿಸಲಾಗಿದೆ. 

ರೈಲ್ವೆ ಪೊಲೀಸರ ಮಾಹಿತಿಯ ಪ್ರಕಾರ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅರಸಿಕೆರೆ ಜಂಕ್ಷನ್ ನಲ್ಲಿ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳನ್ನು ಕೆಲವು ದಿನಗಳಿಂದ ನಿಲ್ಲಿಸಲಾಗಿತ್ತು. ಒಂದು ಮೂಲದ ಪ್ರಕಾರ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com