ರಾಜ್ಯದಲ್ಲಿ ಕೊರೋನಾ ತುಸು ಏರಿಕೆ: 933 ಹೊಸ ಪ್ರಕರಣ ಪತ್ತೆ, 704 ಗುಣಮುಖ, 14 ಸಾವು ದಾಖಲು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 933 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29, 76000ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 933 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29, 76000ಕ್ಕೆ ಏರಿಕೆಯಾಗಿದೆ.

704 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,25,397 ಆಗಿದೆ. ರಾಜ್ಯದಲ್ಲಿ ಸದ್ಯ 12,780 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೋವಿಡ್-19 ನಿಂದ ಇಂದು 14 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 37,794ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.81 ರಷ್ಟಿದ್ದು, ಮರಣ ಪ್ರಮಾಣ ಶೇ. 1.50 ರಷ್ಟಿದೆ.

ಬೆಂಗಳೂರಿನಲ್ಲಿ 291 ಹೊಸ ಪ್ರಕರಣ ಪತ್ತೆಯಾಗಿದ್ದು, 172 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 5 ಸೋಂಕಿತರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com