ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳು 'ಹಿರಿಯ ನಾಗರಿಕರ ಮಾಸ'!

ಅಕ್ಟೋಬರ್ 1 ರಿಂದ ಇನ್ನು ಮುಂದೆ ರಾಜ್ಯ ಸರ್ಕಾರ ಹಿರಿಯ ನಾಗರಿಕರ ತಿಂಗಳನ್ನು ಆಚರಿಸಲಿದ್ದು, ಈ ತಿಂಗಳಿನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅಕ್ಟೋಬರ್ 1 ರಿಂದ ಇನ್ನು ಮುಂದೆ ರಾಜ್ಯ ಸರ್ಕಾರ ಹಿರಿಯ ನಾಗರಿಕರ ತಿಂಗಳನ್ನು ಆಚರಿಸಲಿದ್ದು, ಈ ತಿಂಗಳಿನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಬುಧವಾರ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಆಯೋಜಿಸಿದ್ದ ವಾಕಥಾನ್'ಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ. ಹೃದಯಾಘಾತವಾದಾಗ ಪ್ರಾಥಮಿಕ ಚಿಕಿತ್ಸೆ ಕುರಿತಂತೆ ಮಾಹಿತಿ ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು ಎಂದು ಹೇಳಿದರು. 

ಶೇ.60ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ,25ರಷ್ಟು ಸಾವುಗಳು ಹೃದಯ ರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ಜನರು ದಿನಕ್ಕೆ ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು. ವ್ಯಕ್ತಿ ಮತ್ತು ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯವನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ತಿಳಿಸಿದರು. 

ಅಕ್ಟೋಬರ್ 1 ಹಿರಿಯ ನಾಗರಿಕರ ದಿನ ಇದೆ. 2020- 2030 ವಿಶ್ವ ಹಿರಿಯ ನಾಗರಿಕರ ದಶಕ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳನ್ನು ಹಿರಿಯ ನಾಗರೀಕರ ತಿಂಗಳೆಂದು ಆಚರಿಸಲಾಗುತ್ತದೆ. ಈ ತಿಂಗಳಿನಲ್ಲಿ 60 ವರ್ಷ ತುಂಬಿದ ಎಲ್ಲರೂ ದೀರ್ಘಾವಧಿ ಬದುಕಲು ಅವರ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯಬೇಕು. ಅವರೂ ಸಹ ಗೌರವಯುತವಾಗಿ ತಮ್ಮ ಬದುಕನ್ನು ನಡೆಸಲು ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com