ಮನೆ ಹಾನಿಗೆ ತಕ್ಷಣ ಪರಿಹಾರ ನೀಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ತೀವ್ರ ಮಳೆಯಿಂದ ಹಾನಿಗೊಳಗಾಗಿರುವ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮನೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ತೀವ್ರ ಮಳೆಯಿಂದ ಹಾನಿಗೊಳಗಾಗಿರುವ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮನೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು. 

ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳಿಂದ ಸಿಎಂ ಬೊಮ್ಮಾಯಿ ಮಾಹಿತಿ ಪಡೆದರು.

ಮಳೆಯಿಂದ ಭಾರೀ ಹಾನಿ
ಒಟ್ಟು 3499 ಹೆಕ್ಟೇರ್ ಕೃಷಿ ಬೆಳೆ  ನಾಶವಾಗಿದ್ದು, 2057 ಹೆಕ್ಟೇರ್ ತೋಟಗಾರಿಕಾ ಬೆಳೆ  ನಾಶವಾಗಿದೆ. 2430 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 4378 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇದುವರೆಗೆ ಭಾರೀ ಮಳೆಗೆ 39 ಮಂದಿ ಸಾವನ್ನಪ್ಪಿದ್ದು, 99 ಪ್ರಾಣಿಗಳ ಜೀವಕ್ಕೂ ಹಾನಿಯಾಗಿದೆ. 1730 ಕಿ.ಮೀ ರಸ್ತೆ ಹಾನಿಯಾಗಿದ್ದು,  5419 ಕಿ.ಮೀ. ಗ್ರಾಮೀಣ ರಸ್ತೆ ಹಾನಿಯಾಗಿವೆ. 629 ಸೇತುವೆಗಳು ಹಾನಿಯಾಗಿವೆ. 3264 ಶಾಲಾ ಕಟ್ಟಡಗಳು ಹಾನಿಯಾಗಿದ್ದು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳಿಗೆ ಹಾನಿಯಾಗಿದೆ. 11796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಹಾಗೂ 759 ಟ್ರಾನ್ಸ್ ಫಾರ್ಮರ್ಗಳು ಹಾನಿಗೊಳಪಟ್ಟಿವೆ.

ಸಭೆಯ ಮುಖ್ಯಾಂಶಗಳು:
* ಸತತ ಮಳೆಯಿಂದ ಎಲ್ಲಾ ಕೆರೆಗಳು ತುಂಬಿವೆ. ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿರುತ್ತವೆ. ಸಂಗ್ರಹ ಸಾಮರ್ಥ್ಯ ಹೆಚ್ಚಿರುವ ಕೆರೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆರೆಗಳ ವಡ್ಡು ಬಿರುಕು ಬಿಡದಂತೆ ಎಚ್ಚರ ವಹಿಸಬೇಕು. ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್ ಈ ಬಗ್ಗೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

* ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚನೆ

 * ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು ಪುನ:ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಿ

 * ಬಿದ್ದುಹೋದ ಮನೆಗಳ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ  ಕೈಗೊಳ್ಳುವುದು. ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವುದು.

 * ಭಟ್ಕಳದಲ್ಲಿ ಹಾಗೂ ಸುಳ್ಯ ಸೇರಿದಂತೆ ಇತರ ಕಡೆಗಳ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸುವುದು.

* ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು

 * ಕೊಡಗು ಜಿಲ್ಲೆಯಲ್ಲಿ ಭೂ ಕುಸಿತವಾಗುವ ಬಗ್ಗೆ ಎಚ್ಚರ ವಹಿಸಬೇಕು.

* ಪ್ರವಾಹದಂಥ ತುರ್ತು ಸಂದರ್ಭದಲ್ಲಿ ತಕ್ಷಣ ಪರಿಹಾರ ಕ್ರಮ‌ಕೈಗೊಂಡು, ಆ ಮೂಲಕ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂಬ ಸಂದೇಶ ರವಾನೆ ಮಾಡಬೇಕಿದೆ.

* ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ, ಕೂಡಲೇ ಪರಿಹಾರ ವಿತರಿಸಲು ಸೂಚನೆ.

* ಹಾನಿಯಾಗಿರುವ ಮನೆಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ತಾಲೂಕಿನ ಇಓ ಗಳಿಂದ ಪಡೆಯುವುದು.

* ಕಾಳಜಿ ಕೇಂದ್ರಗಳಲ್ಲಿ ಎಲ್ಲಾ ವ್ಯವಸ್ಥೆಗಳನ್ನು ತಹಶೀಲ್ದಾರ್ ಗಳು ಖಾತರಿ ಪಡಿಸಿಕೊಂಡು ಅದನ್ನು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು.

* ಮೈಸೂರು, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು.

* ಹಾನಿಗೊಳಗಾಗಿರುವ ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡಲು ಸೂಚನೆ

* ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com