ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ: ನಾಲ್ವರ ಮೃತದೇಹ ಹೊರ ತೆಗೆದ ಸಿಬ್ಬಂದಿ!

ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಮುಟ್ಟಳ್ಳಿಯ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎನ್ ಡಿಆರ್ಎಫ್ ಸಿಬ್ಬಂದಿ ಹೊರ ತೆಗೆದಿದ್ದಾರೆ. 
ಗುಡ್ಡ ಕುಸಿತದ ದೃಶ್ಯ
ಗುಡ್ಡ ಕುಸಿತದ ದೃಶ್ಯ
Updated on

ಭಟ್ಕಳ: ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಮುಟ್ಟಳ್ಳಿಯ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎನ್ ಡಿಆರ್ಎಫ್ ಸಿಬ್ಬಂದಿ ಹೊರ ತೆಗೆದಿದ್ದಾರೆ. 

ಅವಶೇಷಗಳ ಅಡಿ ಸಿಲುಕಿ ಮೃತಪಟ್ಟವರನ್ನು ಲಕ್ಷ್ಮೀ ನಾರಾಯಣ ನಾಯ್ಕ್, ಅನಂತ ನಾಯ್ಕ್, ಪ್ರವೀಣ ನಾಯ್ಕ್ ಹಾಗೂ ಲಕ್ಷ್ಮೀ ನಾಯ್ಕ್ ಎಂದು ಗುರುತಿಸಲಾಗಿದೆ. ಮನೆ ಮೇಲೆ ದಿಢೀರ್ ಗುಡ್ಡ ಕುಸಿದಿದ್ದರಿಂದ ಮನೆಯಲ್ಲಿದ್ದವರು ಹೊರಗೆ ಬರಲು ಸಾಧ್ಯವಾಗಿರಲಿಲ್ಲ. 

ಈ ಸುದ್ದಿ ತಿಳಿದ ಕೂಡಲೇ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಆದರೆ ಅವರ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಇನ್ನು ಸ್ಥಳೀಯರು ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ. 

ಭಟ್ಕಳದಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಕಡೆ ನೀರು ತುಂಬಿ ಭಾರೀ ಅನಾಹುತ ಸಂಭವಿಸಿದೆ. ಶಿರಾಲಿ ಭಾಗದಲ್ಲಿ ಅನೇಕ ಮನೆಗಳಲ್ಲಿ ಸಿಕ್ಕಿ ಹಾಕಿಕೊಂಡಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com