ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಶಂಕಿತ ಹಂತಕರ ಗುರುತು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಮತ್ತಿಬ್ಬರು ಸಂಚುಕೋರರು ಮತ್ತು ಶಂಕಿತ ಹಂತಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಇಂದು ಮಂಗಳವಾರ ಗುರುತಿಸಿದ್ದಾರೆ.
ಪ್ರವೀಣ್ ನೆಟ್ಟಾರು(ಸಂಗ್ರಹ ಚಿತ್ರ)
ಪ್ರವೀಣ್ ನೆಟ್ಟಾರು(ಸಂಗ್ರಹ ಚಿತ್ರ)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಮತ್ತಿಬ್ಬರು ಸಂಚುಕೋರರು ಮತ್ತು ಶಂಕಿತ ಹಂತಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಇಂದು ಮಂಗಳವಾರ ಗುರುತಿಸಿದ್ದಾರೆ.

ಬೆಳ್ಳಾರೆ ಸಮೀಪದ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ, (32 ವರ್ಷ) ಹಾಗೂ ಹಾರಿಸ್ (42 ವರ್ಷ) ಎಂದು ಗುರುತಿಸಲಾಗಿದ್ದು ಅವರು ಸದ್ಯ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ಋಷಿಕೇಶ್ ಸೋನವಾನೆ ತಿಳಿಸಿದ್ದಾರೆ. 

ಇಬ್ಬರ ವಿರುದ್ಧವೂ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ UA(P) Act 1967 ಕಲಂ 16, 18 ಕಲಂ 302, 120B r/w 34 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಈಗಾಗಲೇ ಮೊನ್ನೆ ಜುಲೈ 28 ರಂದು ಬಂಧಿಸಲಾಗಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡ ನಂತರ ತನಿಖೆ ಮುಂದುವರೆಸಲಾಗಿದೆ. ಹೆಚ್ಚಿನ ಸಾಕ್ಷ್ಯಾಧಾರಗಳ ಮೇಲೆ ಸದ್ದಾಂ ಮತ್ತು ಹಾರಿಸ್ ನ್ನು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com