ಕೊಡಿಗೆಹಳ್ಳಿ: ಕಳ್ಳನನ್ನು ಹಿಡಿದು ಥಳಿಸಿದ 3 ವ್ಯಕ್ತಿಗಳ ವಿರುದ್ಧ ಪ್ರಕರಣ!

ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ವಾಸವಿರುವ ಉತ್ತರ ಪ್ರದೇಶದ ಮೂವರು ಕಳ್ಳನನ್ನು ಹಿಡಿದು ಥಳಿಸಿದ್ದಕ್ಕಾಗಿ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಾಗಿದೆ. 
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ವಾಸವಿರುವ ಉತ್ತರ ಪ್ರದೇಶದ ಮೂವರು ಕಳ್ಳನನ್ನು ಹಿಡಿದು ಥಳಿಸಿದ್ದಕ್ಕಾಗಿ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಾಗಿದೆ. 

ಕಳ್ಳನೋರ್ವ ತನ್ನ ಇಬ್ಬರು ಸಹಚರರೊಟ್ಟಿಗೆ ಮನೆಯೊಂದಕ್ಕೆ ಮಂಗಳವಾರ ಬೆಳ್ಳಂಬೆಳಿಗ್ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದರು. ಶಬ್ದ ಕೇಳಿದ ಬಳಿಕ ಮೂವರು ವ್ಯಕ್ತಿಗಳು ಓರ್ವನನ್ನು ಹಿಡಿದರು ಆದರೆ ಇಬ್ಬರು ತಪ್ಪಿಸಿಕೊಂಡಿದ್ದರು. 

ಕಳ್ಳನನ್ನು ಹಿಡಿದ ಬಳಿಕ ಪೊಲೀಸರಿಗೆ ಕರೆ ಮಾಡುವ ಬದಲು, ಆತನನ್ನು ಸತತ 3 ಗಂಟೆಗಳ ಕಾಲ ಕೂಡಿ ಹಾಕಿ ಥಳಿಸಿದ್ದರು. ಪೊಲೀಸರು ಮೊದಲು ಕಳ್ಳನ ವಿರುದ್ಧ ಪ್ರಕರಣ ದಾಖಲಿಸಿದ್ದು, ಬಳಿಕ ಆತನನ್ನು ಥಳಿಸಿದ ಮೂವರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. 

ಥಳಿತಕ್ಕೊಳಗಾದ ಕಳ್ಳ ಮುನಿವೆಂಕಟೇಶನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಷಿಕೇಶ್, ಅಬಿನಾಶ್, ರಾಜು ಯಾದವ್ ಎಂಬ ಮೂವರು ವ್ಯಕ್ತಿಗಳ ವಿರುದ್ಧ ಕಳ್ಳನಿಗೆ ಥಳಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.
 
ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿ 30,000 ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನ್ನು ದೋಚಿದ್ದ. ಕಳ್ಳನನ್ನು ಹಿಡಿದ ವ್ಯಕ್ತಿಗಳ ಧೈರ್ಯವನ್ನು ಮೆಚ್ಚುತ್ತೇವೆ ಆದರೆ ಕಾನೂನನ್ನು ಅವರ ಕೈಗೆ ತೆಗೆದುಕೊಳ್ಳಬಾರದಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com