ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!

2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು  ಅದ್ದೂರಿಯಾಗಿ ಆಚರಿಸಲಾಯಿತು
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: 2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಅದರ ಭಾಗವಾಗಿ ಇನ್ನೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಶತಮಾನದಷ್ಟು ಹಳೆಯದಾದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅವರ ಹೆಸರಿನಲ್ಲಿ ಚಿನ್ನದ ಪದಕ ಸ್ಥಾಪಿಸುವಂತೆ ಸಿದ್ದರಾಮಯ್ಯ ಬೆಂಬಲಿಗರರು ಒತ್ತಾಯಿಸುತ್ತಿದ್ದಾರೆ. ಸ್ವತಃ ಕಾನೂನು ಪದವೀಧರರಾಗಿರುವ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾನೂನು ಕೋರ್ಸ್ ನ ಟಾಪರ್ ಗಳಿಗೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಚಿನ್ನದ ಪದಕ ನೀಡಲು ಸಿದ್ಧತೆ ನಡೆಸಲಾಗುತ್ತಿದೆ.

1.05 ಲಕ್ಷ ರೂ.ಗಳ ಡಿಮ್ಯಾಂಡ್ ಡ್ರಾಫ್ಟ್  ನೀಡಿ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಮನವಿ ಸಲ್ಲಿಸಿದ್ದು, ಸಿದ್ದರಾಮಯ್ಯ ವರ ಜೀವಮಾನದ ಸಾಧನೆಗೆ ಪ್ರಶಸ್ತಿ ನೀಡಿ ಗೌರವಿಸುವಂತೆ ಮನವಿ ಮಾಡಿರುವುದಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್  ಹೇಳಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ 45 ವರ್ಷ ಪೂರೈಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಕಾನೂನು ಕಾಲೇಜಿನಿಂದ BA.LLB ನಲ್ಲಿ ಟಾಪರ್‌ಗಳಿಗೆ ಪದಕ / ಬಹುಮಾನ / ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಅರ್ಜಿಯನ್ನು ಸ್ವೀಕರಿಸಿದ್ದರೂ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ತಮ್ಮ ಅಂತಿಮ ಅನುಮೋದನೆಯನ್ನು ನೀಡಬೇಕು. ಎರಡೂ ಸಂಸ್ಥೆಗಳಲ್ಲಿ ಬಿಜೆಪಿ ಸರ್ಕಾರದಿಂದ ನಾಮನಿರ್ದೇಶನಗೊಂಡ ಹಾಲಿ ಶಾಸಕರು ಸೇರಿದಂತೆ ಮತ್ತು ಶೈಕ್ಷಣಿಕ ವಲಯಗಳಿಂದ ಸದಸ್ಯರನ್ನು ಹೊಂದಿವೆ.

ಸಿದ್ದರಾಮಯ್ಯನವರ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪದಕ ಸ್ಥಾಪಿಸಲು ಮನವಿ ಬಂದಿದೆ. ಪ್ರಸ್ತಾವನೆಯನ್ನು ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಮುಂದೆ ಮಂಡಿಸಲಾಗುವುದು ಮತ್ತು ಮುಂದಿನ ಘಟಿಕೋತ್ಸವದಲ್ಲಿ ಪದಕವನ್ನು ನೀಡಲಾಗುವುದು ಎಂದು ವಿವಿ ಉಪಕುಲಪತಿ ಪ್ರೊ.ಸಿ.ಹೇಮಂತಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com